ಬೀದಿ ನಾಯಿಗಳ ಹಾವಳಿ ತಪ್ಪಿಸಲು ಆಗ್ರಹ

0
25

ಶಹಾಬಾದ: ನಗರದ ವಿವಿಧ ವಾರ್ಡಗಳಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಐದಾರು ಜನರು ತುತ್ತಾಗಿದ್ದಾರೆ. ಅದರಲ್ಲಿ ಮಕ್ಕಳ ಮೇಲೆ ಎರಗಿ ಕಚ್ಚಿ ಗಾಯಗೊಳಿಸಿವೆ.ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ.ಕೂಡಲೇ ಬೀದಿ ನಾಯಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನಗರಸಭೆಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶರಣು ಪಗಲಾಪೂರ ನಗರಸಭೆಯ ಪೌರಾಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆಗೆ ನಾಯಿ ಕಡಿತಕ್ಕೆ ಒಳಗಾದ ಬಾಲಕ ಮಲ್ಲಿಕಾರ್ಜುನ ಕರೆದುಕೊಂಡು ಹೋಗಿ ತೋರಿಸಿದರು. ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಎಲ್ಲೆಂದರಲ್ಲಿ ಓಡಾಡುತ್ತಿರುವ ಬೀದಿನಾಯಿಗಳ ಕಾಟದಿಂದ ಬೇಸತ್ತು ಹೋಗಿದ್ದಾರೆ.ನಗರದಲ್ಲಿ ನಾಯಿಗಳ ಹಿಂಡು ಎಲ್ಲೆಂದರಲ್ಲಿ ಓಡಾಡುತ್ತಿವೆ. ಅಧಿಕಾರಿ ವರ್ಗದವರಾದ ತಾವು ಏನು ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು.ಕೂಡಲೇ ನಾಯಿಗಳ ಹಾವಳಿಯನ್ನು ತಪ್ಪಿಸಲು ಎಲ್ಲಾ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

Contact Your\'s Advertisement; 9902492681

ನಗರಸಭೆಯ ಸದಸ್ಯ ಡಾ.ಅಹ್ಮದ್ ಪಟೇಲ್ ಹಾಗೂ ನಾಗರಾಜ ಕರಣಿಕ್ ಮಾತನಾಡಿ, ನಗರಸಭೆ ಆರೋಗ್ಯ ನಿರೀಕ್ಷಕರು ಏನು ಮಾಡುತ್ತದ್ದಾರೆ. ನಗರದ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ನೀಡಿ. ಹಲವು ಬಾರಿ ತಿಳಿಸಿದರೂ ನಗರಸಭೆ ಅಧಿಕಾರಿಗಳಾದ ತಾವು ಮಾತ್ರ ಏನೂ ಗೊತ್ತಿಲ್ಲದವರಂತೆ ಕಣ್ಮುಚ್ಚಿ ಕುಳಿತ್ತಿದೀರಿ ಎಂದು ದೂರಿದರು. ಕೂಡಲೇ ನಾಯಿಗಳ ಹಾವಳಿ ತಪ್ಪಿಸಿ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಹ್ಮದ್ ಬಾಕ್ರೋದ್ದಿನ್ ಹಾಗೂ ಸಾರ್ವಜನಿಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here