ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅನನ್ಯ: ಪ್ರೊ.ಎಸ್.ಕೆ.ಕಲ್ಯಾಣರಾವ 

0
32

ಕಲಬುರಗಿ: ಶಿಕ್ಷಕರು ವಿದ್ಯಾರ್ಥಿಗಳಿಗೆ ಶ್ರೇಷ್ಠ ಜ್ಞಾನ, ಸಂಸ್ಕಾರ, ಮಾನವೀಯ ಮೌಲ್ಯಗಳು ಮತ್ತು ಸೂಕ್ತ ಮಾರ್ಗದರ್ಶನ ಮಾಡಿ, ಅವರನ್ನು ರಾಷ್ಟ್ರದ ಶ್ರೇಷ್ಠ ಸಂಪನ್ಮೂಲಗಳನ್ನಾಗಿ ತನ್ಮೂಲಕ ಸದೃಢ ರಾಷ್ಟ್ರದ ನಿರ್ಮಾಣಕ್ಕೆ ತಮ್ಮದೇ ಆದ ಪ್ರಮುಖ ಕೊಡುಗೆಯನ್ನು ನೀಡುತ್ತಿದ್ದಾರೆಂದು ಪ್ರಾಂಶುಪಾಲ ಪ್ರೊ.ಎಸ್.ಕೆ.ಕಲ್ಯಾಣರಾವ ಅಭಿಪ್ರಾಯಪಟ್ಟರು.

ಅವರು ನಗರದ ನೆಹರು ಗಂಜ್‌ನಲ್ಲಿರುವ ’ಶಾರದಾ ಪದವಿ ಕಾಲೇಜ್’ನಲ್ಲಿ, ಇಲ್ಲಿನ ’ಬಸವೇಶ್ವರ ಸಮಾಜ ಸೇವಾ ಬಳಗ’ವು ಶನಿವಾರ ಹಮ್ಮಿಕೊಂಡಿದ್ದ ’ವಿಶ್ವ ಶಿಕ್ಷಕರ ದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉಪನ್ಯಾಸಕ, ಚಿಂತಕ ಪ್ರೊ. ಎಚ್.ಬಿ.ಪಾಟೀಲ ಮಾತನಾಡಿ, ಶಿಕ್ಷಕರು ವ್ಯಕ್ತಿಯನ್ನು ಶಕ್ತಿಯನ್ನಾಗಿಸುತ್ತಾರೆ. ಬಹು ದೊಡ್ಡ ಸಂಪತ್ತಾದ ಜ್ಞಾನವನ್ನು ನೀಡುತ್ತಾರೆ. ರಾಷ್ಟ್ರದಅಭಿವೃದ್ಧಿಯ ಪ್ರೇರಕ ಶಕ್ತಿಯಾಗಿದ್ದಾರೆ. ಇಂತಹ ವ್ಯಕ್ತಿಯ ಬಗ್ಗೆ ಸಮಾಜ ಪೂಜ್ಯನೀಯ ಭಾವನೆಯನ್ನು ಹೊಂದಿ, ಅವರ ಜ್ಞಾನದ ಸದುಪಯೋಗವನ್ನು ಪಡೆದುಕೊಂಡು ಸ್ವಸ್ಥ ಸಮಾಜಕ್ಕೆ ಕೈಜೋಡಿಸಬೇಕಾದದ್ದು ಅಗತ್ಯವಾಗಿದೆ. ವಿಶ್ವ ಮಟ್ಟದಲ್ಲಿ ಶಿಕ್ಷಕರ ಕೊಡುಗೆಯನ್ನು ಗುರ್ತಿಸಿ ಪ್ರೋತ್ಸಾಹಿಸಬೇಕೆಂಬುದು ಈ ದಿನದ ಉದ್ದೇಶವಾಗಿದೆಯೆಂದರು.

Contact Your\'s Advertisement; 9902492681

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಒಂದೊಂದು ಪ್ರತಿಭೆ ಇರುತ್ತದೆ.ಅದನ್ನು ಗುರುತಿಸಿ, ಬೆಳೆಸಬೇಕಾದದ್ದು ಶಿಕ್ಷಕರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿ ದೆಸೆಯಿಂದಲೇ ರಾಷ್ಟ್ರೀಯ ಪ್ರಜ್ಞೆ, ವೈಜ್ಞಾನಿಕ ಮನೋಭಾವ, ಆತ್ಮಬಲ, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವಂಥಹ ಮುಂತಾದ ಕಾರ್ಯಗಳನ್ನು ಮಾಡಿದರೆ ವಿದ್ಯಾರ್ಥಿಗಳಿಗೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಶಿಲ್ಪಾ ಬಿರಾದಾರ, ಭುವನೇಶ್ವರಿ ಕುರಕೋಟಾ, ಶಿವನಾಗಮ್ಮ ಪಾಟೀಲ, ಪ್ರಮುಖರಾದ ಅಮರ ಬಂಗರಗಿ, ಚನ್ನವೀರಯ್ಯ ಮಠಪತಿ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here