ಸೇಡಂ: ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

0
34

ಕಲಬುರಗಿ; ಪ್ರಸಕ್ತ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ ನಂತರ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ” ಮತ್ತು ವಿದ್ಯಾಸಿರಿ (ಊಟ ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸ್‍ಗಳಾದ ಪಿಯುಸಿ ಮತ್ತು ಸಮನಾಂತರ, ಸಾಮಾನ್ಯ ಪದವಿ ಕೋರ್ಸ್ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್‍ಗಳ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ /ಅರೆ-ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಆನ್‍ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೇಡಂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು https://ssp.postmatmatric.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2024ರ ಸೆಪ್ಟೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ https://bcwd.Karnataka.gov.in ವೆಬ್‍ಸೈಟ್‍ನ್ನು, ಸಹಾಯವಾಣಿ 8050770005ನ್ನು ಹಾಗೂ ಸೇಡಂ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
***

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here