ಕಲಬುರಗಿ: ಮುಖ್ಯಮಂತ್ರಿಗಳಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಕರ್ನಾಟಕ ರಾಜ್ಯಪಾಲರ ನಿರ್ಧಾರ ಮಾಡಿದ್ದು ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ಸಿಲುಕಿಸಲು ಕೇಂದ್ರ ಸರಕಾರ ಸಂಚು ನಡೆಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.
ಈ ಕುರಿತು ತನ್ನ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸಲು ರಾಜಭವನವನ್ನು ಬಿಜೆಪಿಯ ಟೂಲ್ ಆಗಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ನಾಯಕರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರ ತನ್ನ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಆದರೆ ನಮ್ಮ ಪರವಾಗಿರುವ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.