ರಾಜ್ಯ ಕಂಡ ಶ್ರೇಷ್ಠ ಸಾಮಾಜಿಕ ಸುಧಾರಕ ಡಿ. ದೇವರಾಜ ಅರಸು 

0
63

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಲಬುರಗಿ ಅವರ ನಿರ್ದೇಶನದಂತೆ ಅಗಸ್ಟ್ ೨೦, ೨೦೨೪ ರಂದು ಜನನಾಯಕ, ಬಡವರ ಧ್ವನಿ, ‘ಹಿಂದುಳಿದ ವರ್ಗಗಳ ಹರಿಕಾರ’ ಎಂದೇ ಖ್ಯಾತರಾಗಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸ್ ಅವರ ಜನ್ಮದಿನವನ್ನು ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.

“ಬಡತನ ನಿರ್ಮೂಲನೆ” ಅವರ ಮೊದಲ ಆದ್ಯತೆ. ರಾಜ್ಯದಲ್ಲಿ ಸುಧಾರಣೆ ತರಲು ಶೈಕ್ಷಣಿಕ ಹಾಗೂ ತಂತ್ರಜ್ಞಾನ ಹೊಂದಿದ ಮಂತ್ರಿಮಂಡಲವನ್ನು ರಚಿಸಿದರು. “ಉಳುವವನಿಗೆ ಭೂಮಿ” ಅವರ ಮತ್ತೊಂದು ಮಹತ್ತರವಾದ ಯೋಜನೆ. ೧೯೭೩ರಲ್ಲಿ ಮೈಸೂರನ್ನು ‘ಕರ್ನಾಟಕ’ ಎಂದು ನಾಮಕರಣ ಮಾಡಿದರು. ಅವರ ಕಾಲದಲ್ಲಿ ೧೬,೦೦೦ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಒದಗಿಸಲಾಯಿತು.

Contact Your\'s Advertisement; 9902492681

ಇವರ ಯೋಜನೆಗಳಿಂದಾಗಿ ಕೂಲಿ ಮಾಡುವವರು ಭೂ-ಮಾಲೀಕರಾದರು, ಬಡವರು-ಶ್ರೀಮಂತರ ನಡುವಿನ ಅಂತರ ಕಡಿಮೆಯಾಯಿತು.  ರಾಜ್ಯದಲ್ಲಿ ಅಭಿವೃದ್ದಿಯ ಹೊಸ ಶಖೆಗೆ ಕಾರಣರಾದ ಸಾಮಾಜಿಕ ನ್ಯಾಯದ ಹರಿಕಾರ.

ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮೋಹನರಾಜ ಅವರು ಮಾತನಾಡುತ್ತಾ ಡಿ. ದೇವರಾಜ ಅರಸು ಅವರು ರಾಜ್ಯ ಕಂಡ ಶ್ರೇಷ್ಠ ಸಾಮಾಜಿಕ ಸುಧಾರಕರು. ಸತತ ಹತ್ತು ವರ್ಷ ಶಾಸಕರಾಗಿ ಆಯ್ಕೆಯಾಗಿದ್ದ ಅರಸ್ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಅವರ ಅಧಿಕಾರವಧಿಯಲ್ಲಿ ಸಮಾಜದಲ್ಲಿ ಅನೇಕ ಸುಧಾರಣೆಗಳನ್ನು ತಂದರು. “ಬಡತನ ನಿರ್ಮೂಲನೆ” ಅವರ ಮೊದಲ ಆದ್ಯತೆ. ರಾಜ್ಯದಲ್ಲಿ ಸುಧಾರಣೆ ತರಲು ಶೈಕ್ಷಣಿಕ ಹಾಗೂ ತಂತ್ರಜ್ಞಾನ ಹೊಂದಿದ ಮಂತ್ರಿಮಂಡಲವನ್ನು ರಚಿಸಿದರು.

ಉಳುವವನಿಗೆ ಭೂಮಿ, ಹಾವನೂರು ಆಯೋಗದಂತಹ ಅವರ ಪ್ರಮುಖ ನಿರ್ಧಾರಗಳ ಪ್ರತಿಫಲ ಇಂದಿನ ಪೀಳಿಗೆಗೆ ಸಿಗುತ್ತಿದೆ. ಗೇಣಿ ಹೋರಾಟದ ಅನುಷ್ಠಾನ ಆಗದಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗ ರಚಿಸದಿದ್ದರೆ ಈವರೆವಿಗೂ ಬಹುಸಂಖ್ಯಾತರಿಗೆ ನ್ಯಾಯ ಸಿಗುತ್ತಿರಲಿಲ್ಲ ಎಂದು ಹೇಳುತ್ತಾ ರಾಜ್ಯದಲ್ಲಿ ಅಭಿವೃದ್ದಿಯ ಹೊಸ ಶಖೆಗೆ ಕಾರಣರಾದ ಸಾಮಾಜಿಕ ನ್ಯಾಯದ ಹರಿಕಾರನಿಗೆ ಇಂದು ನಾವುಗಳೆಲ್ಲಾ ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದರು.

ಸದರಿ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ನಯನತಾರ ಆಸ್ಪಲ್ಲಿ, ರಶ್ಮಿ, ಮತ್ತು ಕಛೇರಿ ಸಿಬ್ಬಂದಿಗಳಾದ ಜ್ಯೋತಿ ಕಲ್ಲೂರ, ಸುಚೇತಾ ಜೋಗುರು, ಶರಣಮ್ಮ ಎನ್, ಶ್ರೀಮತಿ ಜಯಶ್ರಿ, ಭಾಗ್ಯವತಿ, ಅಂಬಿಕಾ, ಸುನೀತಾ ಸ್ವಾಮಿ, ಸಿದ್ದಲಿಂಗಯ್ಯ ಹೊಸಮನಿ ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು ಎಂದು ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here