ಕಲಬುರಗಿ; ರಾಜ್ಯಪಾರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಮುಡಾ ಹಗರಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಕಲಬುರಗಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿ ಬಂದು ಜಿಲ್ಲಾಧೀಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ರಾಜ್ಯಪಾರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ‘ಮುಡಾ’ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಆಗ್ರಹಿಸಿದರು.
ಅಲ್ಲದೆ, ಕೆಲವೆಡೆ ಭಾವಚಿತ್ರವನ್ನು ದಹಿಸಲಾಗಿದೆ. ಇದಲ್ಲದೆ, ಸಚಿವರಾದ ಜಮೀರ್ ಅಹ್ಮದ್, ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಮಾತನಾಡಿದ್ದಾರೆ.
ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸ್ಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕು ಎಂದೂ ಆಗ್ರಹಿಸಿದ್ದಾರೆ. ಶಾಸಕ ಬಸವರಾಜ್ ಮತಿಮೂಡ್ ಮಾಜಿ ಶಾಸಕ ರಾಜಕುಮಾರ್ ತೆಲ್ಲೂರ್, ಶಾಸಕ ಡಾ ಅವಿನಾಶ್ ಜಾಧವ್,ಮಾಜಿ ಶಾಸಕ ದತ್ತಾತ್ತ್ರೆಯ ಪಾಟೀಲ್ ಅಮರನಾಥ ಪಾಟೀಲ್ ,ಶರಣಪ್ಪ ತಳವಾರ ಅವಣ್ಣ ಮ್ಯಾಕೇರಿ ಶಿವರಾಜ ಪಾಟೀಲ್ ರದ್ದೆವಾಡಿಗಿ ಸೇರಿದಂತೆ ಪಕ್ಷದ ಅನೇಕ ಮುಂಖಡರು ಕಾರ್ಯಕರ್ತರು ಇದ್ದರು.