ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ಕ್ರೀಡಾದಿನವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ವಸತಿ ನಿಲಯದ ಕ್ರೀಡಾಪಟುಗಳಿಗೆ ಕ್ರೀಡಾಸಮವಸ್ತ್ರ ವಿತರಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್, ಜಿಲ್ಲಾ ಹಾಕಿ ಕ್ರೀಡಾ ಸಂಸ್ಥೆ ಕಾರ್ಯದರ್ಶಿ ಅಶೋಕ ನಿಂಬೂರ, ಪ್ರವೀಣ ಪುಣೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.