ಕಲಬುರಗಿ: ಕಲಬುರಗಿಗೆ ಮಂಜುರಾದ ಹಜ್ ಹೌಸ್ ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ ಮಾಡಬೇಕೆಂದು ನಯಾ ಸವೇರಾ ಸಂಘಟನೆಯ ಜಿಲ್ಲಾ ಅಧ್ಯಕ್ಷ ಮೊದ್ದಿನ್ ಪಟೇಲ್ ಅಣಬಿ ಅವರು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಗೆ ಮನವಿ ಸಲ್ಲಿಸಿದರು.
ನಗರದಲ್ಲಿ 63 ಸಾವಿರ ಮುಸ್ಲಿಂ ಮತದಾರರು ಇದ್ದು, ಸುಮಾರು 2000 ಕ್ಕೂ ಹೆಚ್ಚು ಜನ ಪ್ರತಿ ವರ್ಷ ಹಜ್‌ಗೆ ಯಾತ್ರೆಯನ್ನು ಕೈಗೊಳ್ಳುತ್ತಿರುತ್ತಾರೆ. ಸಮುದಾಯದ ಜನರಿಗೆ ಅನುಕೂಲದ ಅಗತ್ಯವಾಗಿದೆ ಎಂದು ತಿಳಿಸಿದರು.
ಕಲಬುರಗಿ ಹಜ್ ಹೌಸ್ ನಿರ್ಮಾಣಕ್ಕಾಗಿ ರೂ. 10 ಕೋಟಿ ಅನುದಾನವನ್ನು ಮಂಜೂರು ಮಾಡಿಸಿಕೊಡಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿ ಒತ್ತಾಯಿಸಿದರು.