ಕಲಬುರಗಿ: ಪೊಲೀಸರ ಮೇಲೆ ಹಲ್ಲೆಗೈಯ್ದು ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವಾಗ ರೌಡಿ ಶೀಟರ್ ಮೇಲೆ ಪೊಲೀಸ್ ಫೈರಿಂಗ್ ಮಾಡಿರುವ ಘಟನೆ ಕಲಬುರಗಿ ನಗರದಲ್ಲಿ ಶನಿವಾರ ನಡೆದಿದೆ.
ಆರೋಪಿ ಅವತಾರ್ಸಿಂಗ್ ಮೇಲೆ ಫೈರಿಂಗ್ ನಡೆದಿದ್ದು, ಹಲವು ಪ್ರಕರಣಗಳ ಆರೀಪಿಯಾಗಿರುವ ಇತನನ್ನು ಸಬ್ ಅರ್ಬನ್ ಪೊಲೀಸರು ಬಂಧಿಸಲು ತೆರಳುದಾಗ ನಗರ ಹೊರವಲಯದ ಬೇಲೂರು ಕ್ರಾಸ್ ಬಳಿ ಘಟನೆ ನಡೆದಿದೆ.
ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳುವಾಗ ಸಬ್ ಅರ್ಬನ್ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ತಟ್ಟೆಪಲ್ಲಿ ಅವರು ಆರೋಪಿಯ ಕಾಲಿಗೆ ಗುಂಡು ಹೊಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಗಾಯಾಳು ಆರೋಪಿ ಅವತಾರ್ಸಿಂಗ್ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿವೆ ಎಂದು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.