ಜ್ಞಾನ ಗಳಿಸಿ ದೇಶದ ಏಳಿಗೆಗೆ ಶ್ರಮಿಸಿ: ಎಲ್ಲಪ್ಪ ನಾಯ್ಕೋಡಿ

0
44

ಕಲಬುರಗಿ : ಶ್ರೇಷ್ಠ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಹೊಂದಿರುವ ಭಾರತ ದೇಶದ ಆಗು ಹೋಗುಗಳು ಮತ್ತು ಬದಲಾವಣೆಗಳನ್ನು ಅರ್ಥೈಸಿಕೊಂಡು ರಾಜ್ಯಶಾಸ್ತ್ರದ ವಿದ್ಯಾರ್ಥಿಗಳು ದೇಶದ ಏಳಿಗೆಗೆ ಶ್ರಮಿಸಬೇಕು ಎಂದು ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಎಲ್ಲಪ್ಪ ನಾಯ್ಕೋಡಿ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದಲ್ಲಿ ಆಯೋಜಿಸಿದ ರಾಜ್ಯಶಾಸ್ತ್ರ ಸಂಘದಕಾರ್ಯ ಚಟುವಟಿಕೆಗಳ ಮುಕ್ತಾಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Contact Your\'s Advertisement; 9902492681

ರಾಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ದೇಶದ ಏಳಿಗೆಗೆ ಶ್ರಮಿಸುವ ಕನಸಿನ ಜೊತೆಗೆ ಮನಸಿರಬೇಕು. ರಾಜಕೀಯ ವಿದ್ಯಾಮಾನಗಳ ಬಗೆ ಅಪಾರ ಜ್ಞಾನ ಸಂಪಾದಿಸಿಕೊಂಡು ಉನ್ನತ ಹುದ್ದೆ ಪಡೆದು ದೇಶ ಸೇವೆಗೆ ಪಣ ತೊಡಬೇಕು ಎಂದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಚಂದ್ರಕಾಂತ್ ಯಾತನೂರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾರ್ವಜನಿಕ ಆಡಳಿತ, ಪಂಚಾಯತ್ ರಾಜ್ ವ್ಯವಸ್ಥೆ ಹಾಗೂ ರಾಜಕೀಯ ವಿದ್ಯಾಮಾನ ಕುರಿತ ಸಂಶೋಧನೆ ಮತ್ತು ಅಧ್ಯಯನದಿಂದ ಮಾತ್ರ ಅಪಾರ ಜ್ಞಾನ ಸಿಗಲಿದೆ. ರಾಜ್ಯಶಾಸ್ತ್ರ ವಿದ್ಯಾರ್ಥಿಗಳು
ನಿರಂತರ ಅಧ್ಯಯನ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ. ಗುರು ಶ್ರೀರಾಮುಲು ಅತಿಥಿಗಣ್ಯರನ್ನು ಸ್ವಾಗತಿಸಿ ಮಾತನಾಡಿ ಸಂವಿಧಾನ ಪ್ರಜೆಗಳಿಗೆ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದೆ. ರಾಜ್ಯಶಾಸ್ತ್ರ ವಿದ್ಯಾರ್ಥಿಗಳು ದೇಶ ಮತ್ತು ರಾಜ್ಯದ ಬೆಳವಣಿಗೆ ಬಗೆ ಗಂಭೀರ ಚಿಂತನೆ ಮಾಡಬೇಕು. ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡುವ ಮೂಲಕ ನಿಸ್ವಾರ್ಥ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಅತಿಥಿ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ರಾಧಿಕಾ ಪ್ರಾರ್ಥಿಸಿದರು, ಶಿವಶರಣ ವಾರ್ಷಿಕ ವರದಿ ವಾಚಿಸಿದರು. ಲತಾ ವಂದಿಸಿದರು. ಸಿದ್ದಣ್ಣ ಕಾರ್ಯಕ್ರಮ ನಿರ್ವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here