ಕಲಬುರಗಿ ಹನಿಟ್ರ್ಯಾಪ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ

0
88

ಕಲಬುರಗಿ: ಕಲಬುರಗಿಯಲ್ಲಿ ನಡೆದಿರುವ ಹನಿ ಟ್ರ್ಯಾಪ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮಾಜಿ ಶಾಸಕ ರಾಜಕುಮಾರ ಪಾಟೀಲ ಆಗ್ರಹಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಇಲ್ಲೀಗಲ್ ಗನ್ ಹಾಗೂ ಮಾರಕಾಸ್ತ್ರಗಳನ್ನು ಬಳಸಿ ಅಮಾಯಕರು ಹಾಗೂ ಉದ್ಯಮಿಗಳನ್ನು ಹೆದರಿಸಲಾಗುತ್ತಿದೆ ಎಂದು ಅವರು ಆಪಾದಿಸಿದರು.

Contact Your\'s Advertisement; 9902492681

ಕಲಬುರಗಿ ಸೇರಿದಂತೆ ರಾಜ್ಯಾದ್ಯಂತ ಇಂತಹ ಅಪರಾಧ ಕೃತ್ಯಗಳು ಜರುಗುತ್ತಿದ್ದರೂ ಸಂಬಂಧಿಸಿದ ಸಚಿವರು ಈ ಬಗ್ಗೆ ಮಾತನಾಡುತ್ತಿಲ್ಲ. ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹಾರಾಷ್ಟ್ರ, ಗೋವಾ, ತೆಲಂಗಾಣದ ಮಹಿಳೆಯರು ಸಂತ್ರಸ್ಥರಿರುವುದರಿಂದ ಈ ಪ್ರಸರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶಾಸಕರಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ, ಬಿಜೆಪಿ ಜಿಲ್ಲಾಧ್ಯಕ್ಷರಾದ ಚಂದು ಪಾಟೀಲ, ಶಿವರಾಜ ಪಾಟೀಲ ರದ್ದೇವಾಡಗಿ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here