ಕಲಬುರಗಿ ಕಸಾಪ ದಿಂದ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ 15 ರಂದು

0
235

ಕಲಬುರಗಿ: ಸುಭದ್ರ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಜಿಲ್ಲೆಯ ಆಯ್ದ ಶಿಕ್ಷಕರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸೆ. 15 ರ ಇಳಿಹೊತ್ತು 3.30 ಕ್ಕೆ ನಗರದ ಕನ್ನಡ ಭವನದಲ್ಲಿ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಒಂದು ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿರುತ್ತದೆ. ದೇಶದ ಬುನಾದಿ ಕಟ್ಟುವ ಶಿಕ್ಷಕರ ಸಮಸ್ಯೆಗಳಿಗೆ ನಾವೆಲ್ಲರು ಮೊದಲು ಆದ್ಯತೆ ನೀಡಬೇಕಾಗಿದೆ. ಅನೇಕ ಹಳ್ಳಿಗಾಡಿನ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದಿದ್ದರೂ ಶಿಕ್ಷಕರು ಮಾತ್ರ ಮಕ್ಕಳಿಗೆ ಕಲಿಸುವ ಆಸಕ್ತಿಯನ್ನು ಕಳೆದುಕೊಂಡಿಲ್ಲ. ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವುದರ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತಿರುವ ಜಿಲ್ಲೆಯ ಶಿಕ್ಷಕ ಸಮೂಹಕ್ಕೆ ಗೌರವಿಸುವ ಕಾರ್ಯ ಪರಿಷತ್ತು ನಿರಂತರವಾಗಿ ಮಾಡುತ್ತಿದೆ ಎಂದು ಅವರು ವಿವರಿಸಿದರು.

Contact Your\'s Advertisement; 9902492681

ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಕರಲಿಂಗಣ್ಣವರ್ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಿಡಿಪಿಐ ಸೂರ್ಯಕಾಂತ ಮದಾನೆ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ ಹೂಗಾರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಪರಮೇಶ್ವರ ದೇಸಾಯಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಪ್ರಶಸ್ತಿಗೆ ಭಾಜನರಾದ ಶಿಕ್ಷಕರು: ರಾಜೇಂದ್ರ ರಂಗದಾಳ, ಗಂಗೋತ್ರಿ ಸಜ್ಜನ್, ಅನೀತಾ ಬಡಿಗೇರ, ಮಾಳಪ್ಪ ನಾಗಲಗಾಂವ, ಚಾಂದಸಾಬ್ ಹಕೀಮ್, ಲಲಿತಾ ಅವ್ಣಣ್ಣ ಮ್ಯಾಕೇರಿ, ರಾಜಶ್ರೀ ಕುಲಕರ್ಣಿ, ಡಾ. ಸೌಮ್ಯ ಗುರುನಾಥ ಪೂಜಾರಿ, ಅನುಪಮಾ ಅಪಗೊಂಡ, ಶ್ರೀಮಂತ ಗಂಜಿ, ಶ್ರೀಶೈಲ್ ಮಾಳಗೆ, ಹಣಮಂತರಾವ ಪಾಟೀಲ, ಕೆ. ಶಂಕ್ರೆಪ್ಪ, ಮಡಿವಾಳಪ್ಪ ಬಾಗೇವಾಡಿ, ಸುರೇಖಾ ಜೋಶಿ, ಮಲ್ಲಿಕಾರ್ಜುನ ಎಸ್ ಹೊಸಮನಿ, ಗುರುದೇವಿ ಚ ಪಾಟೀಲ ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಸತ್ಕರಿಸಲಾಗುವುದು ಎಂದು ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಶರಣರಾಜ ಛಪ್ಪರಬಂದಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here