ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

0
108

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆ ಗೆ ಅನುಮೋದನೆ ದೊರೆತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 47.76 ಕೋಟಿ ರೂ. ವೆಚ್ಚದಲ್ಲಿ 15 ಮಹಿಳಾ. ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಅನುಮೋದನೆ ದೊರೆತಿದೆ. ಪ್ರತಿ ಕಾಲೇಜಿಗೆ 3.18ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ.

Contact Your\'s Advertisement; 9902492681

ಸಂಪುಟ ಸಭೆ ನಂತರ ಪತ್ರಿಕಾ ಹೇಳಿಕೆ ನೀಡಿರುವ ಅವರು,
ವಖ್ಫ್ ಬೋರ್ಡ್ ನಲ್ಲಿ ಜಮೆ ಆಗಿರುವ ಬಡ್ಡಿ ಮೊತ್ತ 47.76 ಕೋಟಿ ರೂ. ನಲ್ಲಿ ಬಾಗಲಕೋಟೆ, ಚಿತ್ರದುರ್ಗ, ಬೀದರ್, ಬಳ್ಳಾರಿ, ಕೊಪ್ಪಳ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ವಿಜಯ ನಗರ, ಕಲಬುರಗಿ, ಉಡುಪಿ, ವಿಜಯಪುರ, ಕೋಲಾರ, ದಾವಣಗೆರೆ ಹಾಗೂ ಧಾರವಾಡ ದಲ್ಲಿ ಮಹಿಳಾ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.
ಮಹಿಳಾ ಕಾಲೇಜು ಸ್ಥಾಪನೆಯಿಂದ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಕ್ಕೆ ಅನುಕೂಲ ವಾಗಲಿದೆ ಎಂದು ಹೇಳಿದ್ದಾರೆ.

ಇದರ ಜತೆಗೆ, ಕರ್ನಾಟಕ ಗೃಹ ಮಂಡಳಿ ವತಿಯಿಂದ 50:50 ಅನುಪಾತದಲ್ಲಿ ಕಲಬುರಗಿಯ ತಾವರೆಗೆರೆ ಯಲ್ಲಿ 80ಕೋಟಿ ರೂ. ವೆಚ್ಚದಲ್ಲಿ ಒಟ್ಟು 286.28 ಎಕರೆ ಪೈಕಿ ಮೊದಲ ಹಂತದಲ್ಲಿ 87.34 ಎಕರೆ ಜಮೀನಿನಲ್ಲಿ ಹೊಸ ಬಡಾವಣೆ ನಿರ್ಮಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here