ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ ಕ್ಕಿಂತ ಹೆಚ್ಚಿದ್ದು, ಸ್ಲಂ ಬೋರ್ಡ್ ವತಿಯಿಂದ ಕೇವಲ 9 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದಾರೆ.ಬಾಕಿ ಉಳಿದರು ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕದ ಸಂಚಾಲಕಿ ರೇಣುಕಾ ಸರಡಗಿ, ಗೌರಮ್ಮ ಮಾಕಾ, ಭಾಗ್ಯವಂತ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಮಾಡಿದರು.
ಮಂಗಳವಾರ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಸಾರ್ವಜನಿಕ ಆಹ್ವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದರು.
ಹಕ್ಕುಪತ್ರಕ್ಕಾಗಿ ಡಿಡಿ ಕಟ್ಟಿ ಒಂದು ವರ್ಷವಾದರು ಜನರಿಗೆ ಹಕ್ಕು ಪತ್ರ ನೀಡದೆ ಗೋಳಾಡುಸುತ್ತಿದ್ದಾರೆ. ಕಳೆದ 5 ವರ್ಷದಿಂದ pmay ಮತ್ತುHFA ಯೋಜನೆಯಡಿಯಲ್ಲಿಯಾದ ಮನೆಗಳು ಇನ್ನು ಸಂಪೂರ್ಣ ನಿರ್ಮಿಸಿಲ್ಲ ಅರ್ಧಕೆ ನಿಲ್ಲಿಸಿದ್ದಾರೆ. ಗುತ್ತಿಗೆದಾರರು ಮತ್ತು ಸ್ಲಂ ಬೋರ್ಡ್ ಅಧಿಕಾರಿಗಳು ಸ್ಲಂ ಜನರನ್ನುಗೋಳಡಿಸುತ್ತಿದು. ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.
ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ಲೈಸೆನ್ಸ್ ನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಮನವಿ ಸಲ್ಲಿಸಿ ಒತ್ತಾಯಿಸಿದರು.