ಕಲಬುರಗಿ.ಮುಖ್ಯಮಂತ್ರಿ ಸಿದ್ದರಾಮಯ್ಯನವರು 17ನೇ ಸೆಪ್ಟೆಂಬರ್ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮತ್ತು ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕಲಬುರಗಿ ಭೇಟಿಯ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಿತಿಯ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ರಚನಾತ್ಮಕ ಪ್ರಗತಿಗೆ ಸಂಬಂಧಿಸಿದ ಎಳು ಜಿಲ್ಲೆಗಳ ವಿಷಯಗಳ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸಲಾಯಿತು.
ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿ ಮತ್ತು ಸಂವಿಧಾನದ 371ನೇ ಜೇ ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಸೇರಿದಂತೆ ಕಲ್ಯಾಣ ಕರ್ನಾಟಕದ ನೀರಾವರಿ, ಕೈಗಾರಿಕೆ, ವಾಣಿಜ್ಯ ,ರಸ್ತೆ, ಸಾರಿಗೆ, ಉದ್ಯೋಗ, ಶಿಕ್ಷಣ, ಕೃಷಿ, ಪ್ರವಾಸೋಧ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳ ಕಾಲಮಿತಿಯ ಅಭಿವೃದ್ಧಿಯ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸಲಾಯಿತು.
ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಮತ್ತು ಸಂವಿಧಾನದ 371ನೇ ಜೇ ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತಾಯಿಸಿ ಕಳೆದ ಜೂನ್ ತಿಂಗಳಿಂದ ಎಳು ಜಿಲ್ಲೆಗಳಲ್ಲಿ ಪ್ರಮುಖ ಬೇಡಿಕೆಗಳು ಮುಂದಿಟ್ಟುಕೊಂಡು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನಿರಂತರ ಹೋರಾಟ ನಡೆಸಿದ
ವಿಷಯಗಳಿಗೆ ಸಮಿತಿಯ ನಿಯೋಗ ಮುಖ್ಯಮಂತ್ರಿಗಳಿಗೆ ಭೇಟಿ ಮಾಡಲು ಬಹಳ ಹಿಂದೆಯೇ ನಿರ್ಧರಿಸಿ ಜಿಲ್ಲಾ ಉಸ್ತುವಾರಾದ ಪ್ರಿಯಾಂಕ್ ಖರ್ಗೆರವರಿಗೆ ಮನವರಿಕೆ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮುತುವರ್ಜಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭೇಟಿ ಮಾಡಿ ಕಲ್ಯಾಣದ ಜ್ವಲಂತ ವಿಷಯಗಳ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲಾಯಿತು.
ಮುಖ್ಯಮಂತ್ರಿಗಳು ಹೋರಾಟ ಸಮಿತಿಯ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತಸ ತಂದಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಬಸವರಾಜ ದೇಶಮುಖ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಹಾಗೂ ಸಮಿತಿಯ ಪ್ರಮುಖರಾದ ಪ್ರೊ.ಆರ್.ಕೆ.ಹುಡಗಿ, ಪ್ರೊ.ಬಸವರಾಜ ಕುಮ್ಮನೂರ್, ಮನೀಷ್ ಜಾಜು ಉಪಸ್ಥಿತರಿದ್ದರು.