ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ ಮತ್ತು ಕುರಿಕೋಟಾ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಜೈಪ್ರಕಾಶ್ ಮತ್ತು ಚಿಂಚೋಳಿ ತಾಲೂಕಿನ ಚಿಮ್ಮಾಇದ್ಲಾಯಿ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಸುಮಾ ಅವರಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಅಭಿನಂದನಾ ಪತ್ರ ನೀಡಿ ಪ್ರಶಂಸೆ ವ್ಯಕ್ತಪಡಿಸಿದರು.
ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಇಬ್ಬರಿಗೂ ಅಭಿನಂದನಾ ಪತ್ರ ನೀಡಿ ಮುಂದೆಯೂ ಇಲಾಖೆಯ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪುವ ರೀತಿಯ ಕಾರ್ಯನಿರ್ವಹಿಸುವಂತೆ ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತರಾದ ಸಾಹಿತ್ಯ, ಪ್ರಭುರೆಡ್ಡಿ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಮೀನಾಕ್ಷಿ ಆರ್ಯ ಸೇರಿದಂತೆ ತಾಲೂಕಿನ ತಹಶೀಲ್ದಾರರು ಇದ್ದರು.