15ನೇ ಹಣಕಾಸಿನಲ್ಲಿ ಅವ್ಯವಹಾರ ಆರೋಪ: ಗ್ರಾ.ಪಂ ಪಿಡಿಒ ಸಸ್ಪೆಂಡ್

0
193

ಕಲಬುರಗಿ: 15ನೇ ಹಣಕಾಸು ಯೋಜನೆಯ ಅನುದಾನ ದುರ್ಬಳಕೆ ಮಾಡಿ ಅವ್ಯವಹಾರ ನಡೆಸಿರುವ ಆರೋಪದಲ್ಲಿ ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಚಾರಣೆಯನ್ನು ಕಾಯ್ದೆರಿಸಿ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಭಂವಾರ ಸಿಂಗ್ ಮೀನಾ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಹರವಾಳ ಗ್ರಾ.ಪಂ ಪಿಡಿಒ ಆಗಿದ್ದ ಗಂಗಾಧರ್ ರವರು 15ನೇ ಹಣಕಾಸು ಯೋಜನೆಯ ಅನುದಾನ ದುರ್ಬಳಕೆ ಮಾಡಿ ಭಾರಿ ಅವ್ಯವಹಾರ ಮಾಡಿದ್ದಾರೆಂದು ಅಂಬೇಡ್ಕರ್ ಯುವ ಸೇನೆ ಜೇವರ್ಗಿ ತಾಲೂಕ ಅಧ್ಯಕ್ಷರಾದ ರವಿಂದ್ರ ನಾಟೆಕರ್ ರವರು ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಾಮಗಾರಿಯನ್ನು ಕೈಗೊಳ್ಳದೆ ಓಚರ್ ಸೃಷ್ಟಿ ಮಾಡಿ ಅನುದಾನ ಲಪಟಾಯಿಸಲಾಗಿದೆ ಅಂತ ದೂರು ಸಲ್ಲಿಸಿದ್ದರು.

Contact Your\'s Advertisement; 9902492681

ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಲು ಹಾಗೂ ತನಿಖೆಗೆ ಸಹಕರಿಸಲು ತಿಳಿಸಲಾಗಿತ್ತು. ಅನೇಕ ಬಾರಿ ದಾಖಲೆ ಸಲ್ಲಿಸುವಂತೆ ತಿಳಿಸಿದ್ದರೂ ಕೂಡ ತನಿಖಾಧಿಕಾರಿಗಳಿಗೆ ಸ್ಪಂದಿಸಿರುವುದಿಲ್ಲ. ದಾಖಲೆ ಸಲ್ಲಿಸಲು ಹಿಂಜರಿಯುತ್ತಿದ್ದ ಪಿಡಿಒ ಗಂಗಾಧರ್ ಕಾಮಗಾರಿಯನ್ನು ಕೈಗೊಳ್ಳದೆ ಹಾಗೂ ಪರಿಕರಗಳನ್ನು ಖರಿದಿಸದೆ ಓಚರ್ ಸೃಜನೆ ಮಾಡಿ ಭಾರಿ ಅವ್ಯವಹಾರ ಮಾಡಲಾಗಿದೆ ಎಂದು ಅಂತ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತಿಗೆ ವರದಿ ಸಲ್ಲಿಸಿದ್ದರು.

ಕಾರ್ಯನಿರ್ವಾಹಕ ಅಧಿಕಾರಿಗಳ ವರದಿ ಆಧರಿಸಿ ಜಿಲ್ಲಾ ಪಂಚಾಯತ ಕಲಬುರಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಂವಾರ ಸಿಂಗ್ ಮೀನಾ ರವರು ಹರವಾಳ ಪಿಡಿಓ ಗಂಗಾಧರ ವಿಚಾರಣೆಯನ್ನು ಕಾಯ್ದೆರಿಸಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here