ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಬಾಲರಾಜ್ ಗುತ್ತೇದಾರ ಆಗ್ರಹ

0
30

ಕಲಬುರಗಿ: ಹೈಕೋರ್ಟ್ ಮತ್ತು ಜನಪ್ರತಿನಿಧಿ ನ್ಯಾಯಾಲಯ ಆದೇಶಗಳ ಹಿನ್ನೆಲೆಯಲ್ಲಿ ಮೂಡ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಕಲಬುರಗಿ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಒತ್ತಾಯ ಮಾಡಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಅಲ್ಲದೆ, ಜನ ಪ್ರತಿನಿಧಿ ನ್ಯಾಯಾಲಯ ಸಿಎಂ ವಿರುದ್ಧ ಎಫ್ ಐ ಆರ್ ದಾಖಲಿಸಿ, ಮೂರು ತಿಂಗಳ ಒಳಗಾಗಿ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೆÇಲೀಸರಿಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯ ಮಾಡಿದರು.

Contact Your\'s Advertisement; 9902492681

ಮುಡಾ ಹಗರಣದ ಕುರಿತು ಬಿಜೆಪಿ ನಿಲುವು ಸ್ಪಷ್ಟವಿದೆ. ಈ ಹಗರಣ ಕೇವಲ 14 ನಿವೇಶನಗಳಿಗೆ ಸೀಮಿತವಲ್ಲ. ಒಂದೆಡೆ 14 ನಿವೇಶನಗಳಿದ್ದರೆ, ಇನ್ನೊಂದೆಡೆ 4 ರಿಂದ 5 ಸಾವಿರ ಕೋಟಿ ಬೆಲೆಬಾಳುವ ನಿವೇಶನಗಳು ರಿಯಲ್ ಎಸ್ಟೇಟ್, ದಲ್ಲಾಳಿಗಳ ಪಾಲಾಗಿದೆ. ಇದೆಲ್ಲವುಗಳ ಸಮಗ್ರ ತನಿಖೆ ಆಗಬೇಕೆಂದರೆ ಅದು ಸಿಬಿಐನಿಂದ ಮಾತ್ರ ಸಾಧ್ಯ ಆದಕಾರಣ ಈ ಪ್ರಕರಣವನ್ನು ಸಿ.ಬಿಐ ಗೆ ವಹಿಸಬೇಕು ಎಂದು ಆಗ್ರಹಿಸಿದ್ದರು.

ಊರಿಗೆಲ್ಲ ನೈತಿಕತೆಯ ಪಾಠ ಮಾಡುವ ಸಿದ್ದರಾಮಯ್ಯ ಅವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದ ಅವರು ಸಿ.ಎಂ ರಾಜೀನಾಮೆ ಕೊಡದಿದ್ದರೆ ಜೆಡಿಎಸ್ ನಿರಂತರವಾಗಿ ಉಗ್ರ ಹೋರಾಟ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here