ಕಲಬುರಗಿ: ಭಾರತ ಸರ್ಕಾರದ ಉಕ್ಕು ಮತ್ತು ಬೃಹತ ಕೈಗಾರಿಕೆ ಸಚಿವರು ಹಾಗೂ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ ಕುಮಾರಸ್ವಾಮಿ ರವರ ಬಗ್ಗೆ ಅಸಭ್ಯ ಭಾಷೆ ಬಳಸಿದ ಭ್ರಷ್ಟಾಚಾರ, ದುರ್ನಡತೆ ಮತ್ತು ಸುಲಿಗೆ ಮುಂತಾದ ಕ್ರಿಮಿನಲ್ ಕೇಸುಗಳಲ್ಲಿ ಭಾಗಿಯಾಗಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳ ಮುಖ್ಯಸ್ಥ ಎಡಿಜಿಪಿ ಎಂ. ಚಂದ್ರಶೇಖರ ರವರನ್ನು ಕೂಡಲೇ ಭಾರತೀಯ ಸೇವೆಯಿಂದ ಅಮಾನತುಗೊಳಿಸಿ ಉನ್ನತ ಮಟ್ಟದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಕೇಡರ್ ಸೆಂಟ್ರಲ್ ಪ್ರಾಧಿಕಾರಿಯಾಗಿರುವ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಕ್ತ ಪ್ರಸ್ತಾವನೆ ಕಳುಹಿಸಲು ಒತ್ತಾಯಿಸಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ ಅವರು ಆದೇಶದ ಮೇರೆಗೆ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಾ.ಸಿದ್ದಣ್ಣ ಪಾಟೀಲ, ಚಿತ್ತಾಪೂರ ಕಾರ್ಯಾಧ್ಯಕ್ಷ ಅಂಬದಾಸ ಚವ್ಹಾಣ, ಉಪಾಧ್ಯಕ್ಷ ಅಬ್ದುಲ್ ಲತೀಫ್, ಮುಖಂಡರಾದ ಸಂಜುಕುಮಾರ ಮಡಕಿ, ಹಣಮಂತ ಕಂದಳ್ಳಿ, ವಿಲಾಸ ಕಣಮಸ್ಕರ್, ಕಾಶಿನಾಥ ಉಡಗಿ, ಮಲ್ಲಿಕಾರ್ಜುನ ಬಗಲ, ಎಂ.ಡಿಪಾಟೀಲ, ಸಿದ್ದರಾಮ ಮಾಂಗ್ ಇದ್ದರು.