ನಿವೇಶನ ವಾಪಸಾತಿ ರಾಜಕೀಯ ನಾಟಕ:ರಾಜಕುಮಾರ ಪಾಟೀಲ ತೇಲ್ಕೂರ

0
41

ಕಲಬುರಗಿ : ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ ವಾಪಸ್ ನೀಡುತ್ತಿರುವುದು ಕಾನೂನಿನ ಕುಣಿಕೆಯಿಂದ ಪಾರಾಗುವ ಉದ್ದೇಶದಿಂದ ಎಂದು ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದರು.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿರುವ ಅವರು ಸಿದ್ದರಾಮಯ್ಯನವರು ತಪ್ಪು ಮಾಡಿದ್ದನ್ನು ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ. 2011ರಲ್ಲಿ ಅಂದಿನ ಸಿಎಂ ಆಗಿದ್ದ ಯಡಿಯೂರಪ್ಪ ಅವರ ವಿರುದ್ಧ ಆರೋಪ ಬಂದಿತ್ತು. ಆಗ, ತಪ್ಪು ಮಾಡದಿದ್ದರೆ ಯಾಕೆ ಸೈಟ್ ಸರೆಂಡರ್ ಮಾಡಿದ್ದಾರೆ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದರು .ಕಳಂಕ, ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು ಇನ್ನಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲದೆ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಗೌರವಾನ್ವಿತ ರಾಜ್ಯಪಾಲರ ಬಳಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದರು.

Contact Your\'s Advertisement; 9902492681

ಸಿಎಂ ತಮ್ಮ ಸ್ಥಾನದಿಂದ ಇಳಿಯುವುದನ್ನೇ ಕಾಂಗ್ರೆಸ್ ಪಕ್ಷದ ಕೆಲವರು ಕಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಆಪ್ತರಾದ ಮಹದೇವಪ್ಪ ಅವರು ಹೇಳಿದ್ದಾರೆ. ಡಿಸಿಎಂ ಶಿವಕುಮಾರ್ ಅವರು ಗೌಪ್ಯವಾಗಿ ಪರಮೇಶ್ವರರನ್ನು ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ಮಾಡಿದ್ದಾರೆ. ಶಿವಕುಮಾರ್, ಪರಮೇಶ್ವರ್ ಅವರು, ಇನ್ನೂ ಕೂಡ ಸಿದ್ದರಾಮಯ್ಯರನ್ನು ರಕ್ಷಿಸಲು ಸಾಧ್ಯವಿಲ್ಲ; ಕಷ್ಟ ಆಗುತ್ತಿದೆ, ಪಕ್ಷಕ್ಕೂ ಮುಜುಗರ ಆಗುತ್ತಿದೆ. ಸಿದ್ದರಾಮಯ್ಯರು ಬೇಗ ರಾಜೀನಾಮೆ ಕೊಟ್ಟರೆ ಅಷ್ಟೇ ಒಳಿತೆಂಬ ವಿಚಾರ ಚರ್ಚೆ ಆಗಿದೆ ಎಂಬ ವಿಚಾರ ನಮಗೆ ಲಭಿಸಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಳೆದ 3-4 ತಿಂಗಳುಗಳಿಂದ ನಿರಂತರವಾಗಿ ಹೋರಾಟ ಮಾಡುತ್ತ ಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿಯ ಹಗರಣ, ಮೈಸೂರು ಮುಡಾ ಹಗರಣ, ಎಸ್ಇಪಿ, ಟಿಎಸ್ಪಿ ಹಣದ ದುರುಪಯೋಗ-ಇವೆಲ್ಲ ವಿಚಾರಗಳನ್ನು ಇಟ್ಟುಕೊಂಡು ಹೋರಾಟ ನಡೆಸಿದ್ದೇವೆ.

ಹಿಂದಿನ ಅವಧಿಯಲ್ಲಿ 5 ವರ್ಷ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು, ಭ್ರಷ್ಟಾಚಾರ ಆರೋಪ ಬಂದಾಗ ಲೋಕಾಯುಕ್ತಕ್ಕೆ ಬೀಗ ಹಾಕಿ, ಎಸಿಬಿ ಸ್ಥಾಪಿಸಿದ್ದರು. ಆರೋಪಗಳನ್ನು ಮುಚ್ಚಿ ಹಾಕಲು ಎಸಿಬಿಗೆ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದರು. ಕೆಂಪಣ್ಣ ಆಯೋಗ ಸ್ಥಾಪಿಸಿದ್ದು, ಸಿದ್ದರಾಮಯ್ಯನವರ ವಿರುದ್ಧ ಗುರುತರ ಆರೋಪಗಳನ್ನು ವರದಿಯಲ್ಲಿ ಉಲ್ಲೇಖಿಸಿದ್ದರೂ ಸಿದ್ದರಾಮಯ್ಯನವರು ಕಣ್ಮುಚ್ಚಿ ಕುಳಿತಿದ್ದರು ಎಂದು ಟೀಕಿಸಿದರು.

ಭ್ರಷ್ಟಾಚಾರರಹಿತ ಆಡಳಿತ ಕೊಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು 187 ಕೋಟಿಯ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಮಾಡಿದೆ. ಮುಡಾ ಹಗರಣದಲ್ಲಿ ಅಕ್ರಮವಾಗಿ ಮುಖ್ಯಮಂತ್ರಿಗಳ ಧರ್ಮಪತ್ನಿ ಪಾರ್ವತಿಯವರಿಗೆ 14 ನಿವೇಶನ ನೀಡಿದ್ದು ಒಂದು ಕಡೆ ಇದ್ದರೆ, ಸಿದ್ದರಾಮಯ್ಯನವರು ಸಿಎಂ ಆದ ಬಳಿಕ ಮೈಸೂರು ಮುಡಾದಲ್ಲಿ ಸಾವಿರಾರು ಕೋಟಿ ಬೆಲೆಬಾಳುವ 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಅವರಿಗೆ ಬೇಕಾದ ಪುಡಾರಿಗಳು, ರಿಯಲ್ ಎಸ್ಟೇಟ್ ದಲ್ಲಾಳಿಗಳಿಗೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here