ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

0
25

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ’ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಪತ್ರಿಕೋದ್ಯಮದ ಪ್ರತಿಷ್ಠಿತ ಟಿಎಸ್‍ಆರ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಾರ್ತಾಸೌಧದ ಸುಲೋಚನಾ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಶ್ರೀಕಾಂತಾಚಾರ್ಯರಿಗೆ 2020ನೇ ಸಾಲಿನ ಟಿಎಸ್‍ಆರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

Contact Your\'s Advertisement; 9902492681

ಪ್ರಶಸ್ತಿಯು ಎರಡು ಲಕ್ಷ ರೂ. ನಗದು, ಸ್ಮರಣಿಕೆ, ಪ್ರಶಸ್ತಿಪತ್ರಗಳನ್ನು ಒಳಗೊಂಡಿದೆ. ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ವಾರ್ತಾ ಇಲಾಖೆಯ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಆಯುಕ್ತ ಹೇಮಂತ್ ಎಂ. ನಿಂಬಾಳಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ಚಿತ್ರನಟ ಸಾಧು ಕೋಕಿಲ ಮತ್ತಿತರ ಗಣ್ಯರು ಇದ್ದರು.

ಮೂಲತಃ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣೂರ ಗ್ರಾಮದವರಾದ ಶ್ರೀಕಾಂತಾಚಾರ್ಯರು 1973ರಲ್ಲಿ `ಸಂಯುಕ್ತ ಕರ್ನಾಟಕ’ ಸೇರುವ ಮೂಲಕ ವೃತ್ತಿಜೀವನ ಪ್ರಾರಂಭಿಸಿ 45 ವರ್ಷಗಳ ಕಾಲ ಇದೇ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ವರದಿಗಾರ, ಪ್ರಧಾನ ವರದಿಗಾರ, ವಿಶೇಷ ಪ್ರತಿನಿಧಿ, ಸ್ಥಾನಿಕ ಸಂಪಾದಕ, ಕಾರ್ಯನಿರ್ವಾಹಕ ಸಂಪಾದಕ, ಸಂಪಾದಕೀಯ ಸಲಹೆಗಾರ ಹೀಗೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರದು.

ಕೃಷಿ, ನೀರಾವರಿ, ಶಿಕ್ಷಣ, ಕಲೆ, ಸಂಸ್ಕøತಿ, ಜನಜೀವನ, ಶಿಕ್ಷಣ, ಧಾರ್ಮಿಕ, ಸಾಮಾಜಿಕ ಪಿಡುಗು, ಕಾನೂನು, ಅಪರಾಧ ಚಟುವಟಿಕೆಗಳು, ಹೀಗೆ ಹತ್ತು ಹಲವು ವಿಷಯಗಳ ಬಗ್ಗೆ ಅಧ್ಯಯನ, ಮಾಹಿತಿ
ಸಂಗ್ರಹಣೆ ಕೈಗೊಂಡು ಸಕಾಲಿಕ ವರದಿಗಳನ್ನು ಬರೆದು ಇಡೀ ನಾಡೇ ಗಮನ ಸೆಳೆಯುವಂತೆ
ಮಾಡಿದ್ದಾರೆ. ಯುಕೆಪಿ ತುಂಡು ಗುತ್ತಿಗೆ ಹಗರಣದ ಹಲವು ವಿಶೇಷ ವರದಿ ಬರೆದು ಆಗಿನ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು.

ಪತ್ರಿಕೋದ್ಯಮ ರಂಗದಲ್ಲಿನ ಇವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಇದಲ್ಲದೇ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ, ಚರಕ ಪ್ರಶಸ್ತಿ, ನಾಥ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಗೌರವ ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here