ಕಲಬುರಗಿ: ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಯಶವಂತಪುರ-ಸೋಲಾಪುರ ಎಕ್ಸ್ಪ್ರೆಸ್ ರೈಲಿನ ಮೂಲಕ ಗುರುವಾರ ಅಕ್ಟೋಬರ್ 17 ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅವರು ಅಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮುಖ್ಯಮಂತ್ರಿಗಳೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ೪ ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಶುಕ್ರವಾರ ಅಕ್ಟೋಬರ್ 18 ರಂದು ಬೆಳಿಗ್ಗೆ 10 ಗಂಟೆಗೆ ಲೋಕೋಪಯೋಗಿ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಅಂದು ರಾತ್ರಿ ೭ ಗಂಟೆಗೆ ಉದ್ಯಾನ ಎಕ್ಸ್ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.