ಶ್ರೀ ಶರಣಬಸವೇಶ್ವರರ ದೇವಸ್ಥಾನ: ನಗರದ ಮುಖ್ಯ ರಸ್ತೆಯಲ್ಲಿ ಮಹಾದ್ವಾರ ನಿರ್ಮಾಣಕ್ಕೆ ಮನವಿ

0
19

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ನಗರದ ಸಾವಿರಾರು ವರ್ಷ ಇತಿಹಾಸ ಹೊಂದಿರುವ ಪುರಾತನ ಪುಣ್ಯ ಕ್ಷೇತ್ರ ದೇವಸ್ಥಾನವಾದ ಆರಾಧ್ಯದೈವ ಶ್ರೀ ಶರಣಬಸವೇಶ್ವರರ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಕಲಬುರಗಿ ನಗರದ ಮುಖ್ಯ ರಸ್ತೆಯಲ್ಲಿ ಮಹಾದ್ವಾರ ಬಾಗಿಲು ನಿರ್ಮಾಣ ಮಾಡಿ ಅನುಕೂಲ ಮಾಡಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಚೀನ್ ಎಸ್. ಫರತಾಬಾದ ಅವರ ನೇತೃತ್ವದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ನಗರದ ಆರಾಧ್ಯದೈವ ಶ್ರೀ ಶರಣಬಸವೇಶ್ವರರ ದೇವಸ್ಥಾನಕ್ಕೆ ಅನೇಕ ಭಕ್ತರು ದರ್ಶನ ಪಡೆಯಲು ಸುತ್ತಮುತ್ತಲಿನ ಗ್ರಾಮಗಳಿಂದ, ಜಿಲ್ಲೆಗಳಿಂದ, ರಾಜ್ಯಗಳಿಂದ, ದೇಶಗಳಿಂದ ದೇವರ ದರ್ಶನ ಮಾಡಲು ಬರುತ್ತಾರೆ. ಆದರೆ ಕಲ್ಯಾಣ ಕರ್ನಾಟಕ ಕಲಬುರಗಿಯ ಪ್ರಸಿದ್ಧ ದೇವಸ್ಥಾನಗಳು ಶ್ರೀ ಶರಣಬಸವೇಶ್ವರರ ದೇವಸ್ಥಾನ ಹಾಗೂ ಖಾಜಾ ಬಂದೇನವಾಜ್ ದರ್ಗಾ, ಈ ಎರಡು ದೇವಸ್ಥಾನಗಳು ಕಲಬುರಗಿಯ ಎರಡು ಕಣ್ಣುಗಳು ಆಗಿದ್ದು, ಅತ್ಯಂತ ಪುರಾತ ಸಾವಿರಾರು ವರ್ಷ ಇತಿಹಾಸ ಹೊಂದಿರುವ ಶ್ರೀ ಶರಣಬಸವೇಶ್ವರ ದೇವಸ್ಥಾನ ಕಲ್ಯಾಣ ಕರ್ನಾಟಕದ ದೊಡ್ಡ ಪ್ರಸಿದ್ಧ ದೇವಾಲಯ ಆಗಿರುತ್ತದೆ. ಹಾಗೂ ಶ್ರಾವಣ ಮಾಸದಲ್ಲಿ 01 ತಿಂಗಳ ವಿಶೇಷ ಪೂಜೆ ಹಾಗೂ ಪ್ರತಿದಿನ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಆದರೆ ದೇವಸ್ಥಾನಕ್ಕೆ ಹೋಗುವ ಯಾವುದೇ ಮಾರ್ಗದಲ್ಲಿ ಮಹಾದ್ವಾರ ಬಾಗಿಲು ಇರುವುದಿಲ್ಲ. ಇದರಿಂದ ಹೊರರಾಜ್ಯದಿಂದ ಬರುವ ಭಕ್ತಾಧಿಗಳಿಗೆ ಅನಾನುಕೂಲ ಆಗುತ್ತಿದೆ.

Contact Your\'s Advertisement; 9902492681

ಆದ್ದರಿಂದ ಮಾನ್ಯರು ದಯಮಾಡಿ ಕಲಬುರಗಿ ನಗರದ ತಿಮ್ಮಾಪೂರಿ ವೃತ್ತದಿಂದ ಕೋರ್ಟ ಹೋಗುವ ರಸ್ತೆಯ ಹತ್ತಿರ ಮಹಾದ್ವಾರ ನಿರ್ಮಾಣ. ಸುಪರ್ ಮಾರ್ಕೆಟ್ ಬಸ್ ನಿಲ್ದಾಣ ದಿಂದ ದೇವಸ್ಥಾನಕ್ಕೆ ಹೋಗುವ ರಸ್ತೆಯ ಮೇಲೆ ಮಹಾದ್ವಾರ ನಿರ್ಮಾಣ, ಜಗತ್ ವೃತ್ತ ದಿಂದ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಮಹಾದ್ವಾರ ನಿರ್ಮಾಣ, ಈ ರೀತಿಯಾಗಿ ನಗರದ 3 ಮುಖ್ಯ ರಸ್ತೆಗಳ ಒಂದರಲ್ಲಿ ಶ್ರೀ ಶರಣಬಸವೇಶ್ವರರ ದೇವಸ್ಥಾನದ ಮಹಾದ್ವಾರ ನಿರ್ಮಾಣ ಮಾಡಿ, ಎಲ್ಲಾ ಗ್ರಾಮ, ನಗರ. ತಾಲೂಕಾ, ಜಿಲ್ಲಾ, ರಾಜ್ಯ, ದೇಶಗಳಿಂದ ಬರುವ ಭಕ್ತಾಧಿಗಳಿಗೆ ದೇವಸ್ಥಾನಕ್ಕೆ ಬರಲು ಅನುಕೂಲ ಮಾಡಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ವತಿಯಿಂದ ಇಲ್ಲಿನ ಕಲಬುರಗಿ ಜಿಲ್ಲೆಯ ಉಸ್ತುವಾರಿರವರಿಗೆ ವೈದ್ಯಕೀಯ ಸಚಿವರಿಗೆ, ಲೋಕಸಭಾ ಸದಸ್ಯರಿಗೆ, ಕೆಕೆಆರ್‍ಡಿಬಿ ಅಧ್ಯಕ್ಷರಿಗೆ ಹಾಗೂ ಎಲ್ಲಾ ಶಾಸಕರಿಗೆ ಭೇಟಿ ನೀಡಿ ಈ ವಿಷಯದ ಬಗ್ಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುರೇಶ ಹನಗುಡಿ, ಅಕ್ಷಯ, ಗುಡ್ಡು ಸಿಂಗ್ ವಿಕಾಸ, ಅಣವೀರ ಪಾಟೀಲ, ರವಿ ಸಜ್ಜನ್, ಪ್ರಕಾಶ, ಬಸ್ಸು, ಅಜಯ, ಪ್ರವೀಣ ಸಿಂಧೆ, ಅಂಬು ಮಸ್ಕಿ, ಸಾಯಿಕುಮಾರ ಸಿಂಧೆ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here