ಕಲಬುರಗಿ ಹಾಲಿಗೆ ಮಹಾರಾಷ್ಟ್ರ ದಲ್ಲಿ ಬೇಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶಂಸೆ

0
29

ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್‌ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲಬುರಗಿಯ ಹಾಲು ಗುಣಮಟ್ಟದಿಂದ ಕೂಡಿರುವುದರಿಂದ ನೆರೆಯ ಮಹಾರಾಷ್ಟ್ರದವರು ಪೂರೈಕೆ ಮಾಡಲು ಬೇಡಿಕೆ ಸಲ್ಲಿಸಿದ್ದಾರೆ. ಈಗ ದಿನಕ್ಕೆ ಹದಿನೈದು ಸಾವಿರ ಲೀಟರ್‌ ಹಾಲು ಪೂರೈಕೆಯಾಗುತ್ತಿದ್ದು ಇದರಿಂದ ಈ ಸಹಕಾರಿ ಒಕ್ಕೂಟ ಆರ್ಥಿಕ ಬಲ ಬಂದಂತಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

” ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನೋದ್ಯಮಕ್ಕೆ ಆದ್ಯತೆ ನೀಡುವುದು ನಮ್ಮ ಸರ್ಕಾರದ ಧ್ಯೇಯವಾಗಿದ್ದು, ರೈತರು, ಅನ್ನದಾತರ ಏಳಿಗೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ಹೈನುಗಾರಿಕೆಯಲ್ಲಿ ಇನ್ನಷ್ಟು ಸಾಧನೆಯನ್ನು ನಿರೀಕ್ಷಿಸಬಹುದಾಗಿದೆ” ಎಂದು ಅವರು ಹೇಳಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here