ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ ಅಕ್ಟೋಬರ್ ಮೂರರಂದು ಕಲ್ಬುರ್ಗಿಯಲ್ಲಿ ನಡೆದ ” ದುಶ್ಚಟ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ” ಸಂಕಲ್ಪದೊಂದಿಗೆ ಹಮ್ಮಿಕೊಂಡ ಜನಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯ ಕೋಶಾಧಿಕಾರಿ ಹಾಗೂ ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿಡಾ. ಸದಾನಂದ ಪೆರ್ಲ, ಅಧ್ಯಕ್ಷರಾದ ಸಿ.ಎನ್ ಬಾಬಳಗಾoವ್, ಯೋಜನೆಯ ಕಲಬುರ್ಗಿ ಜಿಲ್ಲಾ ನಿರ್ದೇಶಕರಾದ ಗಣಪತಿ ಮಾಳಿಂಜೆ, ಯೋಜನಾಧಿಕಾರಿಗಳಾದ ಕಲ್ಲನಗೌಡ, ರಿಯಾಜ್ ಅತ್ತಾರ್ ಮತ್ತು ರಾಜೇಶ್ ಕೆ. ಇದ್ದರು.