ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

0
50

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ ಜೆಡಿಎಸ್‍ನವರಿಗೆ ಯಾವುದೇ ನೈತಿಕತೆಯಿಲ್ಲ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಪೀರಪಾಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡು ಎಂದು ಹೇಳಿಲ್ಲ. ಅವರು ರಾಜೀನಾಮೆ ನೀಡುವ ಅಗತ್ಯ ಇಲ್ಲ.ಇದೊಂದು ಬಿಜೆಪಿಯ ರಾಜಕೀಯ ಪಿತೂರಿಯಾಗಿದ್ದು, ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇದು ದೇಶದ ಎಲ್ಲಾ ವಿಪಕ್ಷಗಳ ನಾಯಕರ ವಿರುದ್ಧ ಬಿಜೆಪಿಯ ರಾಜಕೀಯ ಪಿತೂರಿಯಾಗಿದೆ.

Contact Your\'s Advertisement; 9902492681

ಬಿಜೆಪಿಯವರು ತೊಂದರೆ ಸೃಷ್ಟಿಸುತ್ತಿದ್ದಾರೆ.ನಮ್ಮ ಪಕ್ಷ ಹಾಗೂ ಸಚಿವ ಸಂಪುಟ ಸಿಎಂ ಸಿದ್ದರಾಮಯ್ಯನವರ ಹಿಂದೆ ನಿಂತಿದ್ದು, ಅವರನ್ನು ಬೆಂಬಲಿಸುತ್ತೇವೆ. ಅವರು ದೇಶ, ಪಕ್ಷ ಹಾಗೂ ರಾಜ್ಯಕ್ಕಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು. ರಾಜ್ಯಪಾಲರು ಅವರ ಶಕ್ತಿಯನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಮಂತ್ರಿ ಮುರುಗೇಶ್ ನಿರಾಣಿ ವಿಚಾರದಲ್ಲೂ ತೋರಿಸಬೇಕು ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯನವರು ಚೆಕ್ ಮೂಲಕ ಲಂಚ ಪಡೆದಿಲ್ಲ. ಸಿದ್ದರಾಮಯ್ಯನವರು ಕಮಿಷನ್ಗೆ ಪೀಡಿಸಿ ಯಾವುದೇ ಗುತ್ತಿಗೆದಾರನ ಆತ್ಮಹತ್ಯೆಗೆ ಕಾರಣವಾಗಿಲ್ಲ. ಸಿದ್ದರಾಮಯ್ಯನವರು ಅಪ್ರಾಪ್ತ ಹೆಣ್ಣುಮಗಳಿಗೆ ದೌರ್ಜನ್ಯ ಎಸಗಿ ಪೆÇೀಕ್ಸೋ ಕೇಸ್ ಹಾಕಿಸಿಕೊಂಡಿಲ್ಲ ಎಂದು ಬಿಜೆಪಿ ನಾಯಕರ ಮೇಲಿರುವ ಆರೋಪಗಳನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದೆ.

ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ರೈಲು? ” ಸಿದ್ದರಾಮಯ್ಯನವರು ಹೆಣಗಳ ಮೇಲೆ ಹಣ ಮಾಡಿಲ್ಲ. ಸಿದ್ದರಾಮಯ್ಯನವರು ಶಾಲೆ ಕಟ್ಟಿಸುತ್ತೇನೆ ಎಂದು ಕೆಐಎಡಿಬಿ ನಿವೇಶನ ಪಡೆದು ಬಿರಿಯಾನಿ ಹೋಟೆಲ್ ಸಹ ನಡೆಸುತ್ತಿಲ್ಲ. ಸಿದ್ದರಾಮಯ್ಯನವರು ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡು ಯಾವುದೇ ಭೂಮಿ ಕೊಳ್ಳೆ ಹೊಡೆದಿಲ್ಲ. ಸಿದ್ದರಾಮಯ್ಯನವರು ಅಕ್ರಮವಾಗಿ ಗಣಿ ಗುತ್ತಿಗೆ ನೀಡಿಲ್ಲ. ಈ ಎಲ್ಲ ಆರೋಪಗಳನ್ನು ಎದುರಿಸುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರಿಗೆ ಸಿದ್ದರಾಮಯ್ಯನವರನ್ನು ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿಯವರು ಸುಳ್ಳೇ ತಮ್ಮ ಮನೆದೇವರು ಎನ್ನುವುದನ್ನು ಪದೆ ಪದೆ ಸಾಬೀತು ಮಾಡುತ್ತಿದ್ದಾರೆ ಎಂದು ದೂರಿದರು. ಈ ಪ್ರಕರಣದಲ್ಲಿ ಯಾವುದೇ ಪಾತ್ರವಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಗುರಿಯಾಗಿಸಿ ದೂರು ನೀಡಲಾಗಿದೆ. ಇದು ರಾಜಕೀಯ ದುರುದ್ದೇಶವಲ್ಲದೆ ಇನ್ನೇನೂ ಅಲ್ಲ. ರಾಜಕೀಯ ಮಾಡುವದಿದ್ದರೇ ಸಾರ್ವಜನಿಕರಿಗಾಗಿ ಉತ್ತಮ ಕೆಲಸ ಮಾಡಿ ತೋರಿಸಿ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here