ಸುರಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಕಲಬುರಗಿ ಹಾಗೂ ಯಾದಗಿರಿ ವಲಯ ಸಂಘಟನಾ ಕಾರ್ಯದರ್ಶಿ ಧನಂಜಯ ಅವರು ನಗರದ ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆ ಬಾಲಕರ ವಸತಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಕುಂದು ಕೊರತೆಗಳ ಕುರಿತು ಚರ್ಚಿಸಿದರು.
ವಸತಿ ನಿಲಯಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ಸಂಘಟನೆಯ ಮುಖಂಡರ ಗಮನಕ್ಕೆ ತಂದ ನಂತರ ವಸತಿ ನಿಲಯಗಳಲ್ಲಿ ಗ್ರಾಮೀಣ ಪ್ರದೇಶಗಳಿಂದ ಬಂದು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಸರಕಾರದಿಂದ ದೊರೆಯುವ ಎಲ್ಲಾ ಸವಲತ್ತುಗಳನ್ನು ಒದಗಿಸಬೇಕು ಎಂದು ನಿಲಯಗಳ ಮೇಲ್ವಿಚಾರಕರಿಗೆ ಸಂಘಟನಾ ಕಾರ್ಯದರ್ಶಿ ಧನಂಜಯ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಕ್ಯಾತಪ್ಪ ಮೇದಾ, ನಗರ ಕಾರ್ಯದರ್ಶಿ ಪರಶುರಾಮ ಬೈಲಕುಂಟಿ, ಹಾಸ್ಟೆಲ್ ಪ್ರಮುಖ ಹಣಮಂತರಾಯ ಲಾಠಿ, ಧರ್ಮರಾಜ, ಮಲ್ಲು ಹಿರೇಮಠ ದೇವಾಪುರ, ಹುಲಗಪ್ಪ ಮೇದಾ, ಶಿವು ಕೊಂಗಂಡಿ ಇತರರು ಇದ್ದರು.