ಮನ್ನೂರ ಆಸ್ಪತ್ರೆ; ಬಡಜನರಿಗೆ ರಿಯಾಯಿತಿ ದರದಲ್ಲಿ ಕ್ಯಾನ್ಸರ್‌ ಚಿಕಿತ್ಸೆ ನೀಡಲು ನಿರ್ಧಾರ

0
35

ಕಲಬುರಗಿ: ಆಹಾರ ಪದ್ಧತಿ, ಒತ್ತಡದ ಜೀವನ ಮತ್ತು ಬೊಜ್ಜು, ಕಲುಷಿತ ಪರಿಸರ, ದೇಹ ದಂಡಿಸದೇ ಇರುವ ಕಾರಣದಿಂದ ಕ್ಯಾನ್ಸರ್ ರೋಗ ಬರುತ್ತದೆ. ಪ್ರಪಂಚದಲ್ಲಿ ಅತ್ಯಂತ ಹಾನಿಕಾರಕವಾಗಿರುವ ಕಾಯಿಲೆಗಳಲ್ಲಿ ಕ್ಯಾನ್ಸರ್ ರೋಗವು ಒಂದು. ಕ್ಯಾನ್ಸರ್ ರೋಗದ ಆರಂಭಿಕ ಪತ್ತೆಯಿಂದ ಜೀವಗಳನ್ನು ಉಳಿಸಬಹುದು. ಪ್ರತಿಯೊಬ್ಬರು ಪ್ರತಿದಿನ ಒಂದು ಗಂಟೆ ಅವರ ಜೀವನಕ್ಕಾಗಿ ಮೀಸಲು ಇಡಬೇಕು, ಯೋಗ, ವಾಕಿಂಗ್, ವ್ಯಾಯಾಮ ಮಾಡುವುದರಿಂದ ಆರೋಗ್ಯವಂತರಾಗಿ ಇರಬಹುದು ಎಂದು ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರುಕ್ ಮನ್ನೂರ ಹೇಳಿದರು.

ನಗರದ ರಿಂಗ್ ರಸ್ತೆಯಲ್ಲಿರುವ ಜಿಲ್ಲೆಯ ಪ್ರತಿಷ್ಠಿತ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ (ಅಕ್ಟೋಬರ್‌) ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿ ಮೊದಲ ಹಂತದಲ್ಲಿ ಕ್ಯಾನ್ಸರ್ ಪತ್ತೆ ಮಾಡಿದರೆ, ಬೇಗನೆ ಚಿಕಿತ್ಯೆ ನೀಡಿ ಜನರ ಜೀವನ ಉಳಿಸಬಹುದು. ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚು ಕಂಡು ಬರುತ್ತಿದೆ ಅದ್ದರಿಂದ ಸ್ತನ ಕ್ಯಾನ್ಸರ್ ಕುರಿತು ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮ‌ ಆಯೋಜಿಸಲಾಗುತ್ತಿದೆ ಎಂದರು.

Contact Your\'s Advertisement; 9902492681

ಖ್ಯಾತ ಕ್ಯಾನ್ಸರ್ ತಜ್ಞ ವೈದ್ಯರಾದ ಡಾ. ಅರುಣ ಬರದ್ ಮಾತನಾಡಿ ಕ್ಯಾನ್ಸರ್ ನಿಂದ ಆತಂಕ ಪಡಬೇಡಿ ಕ್ಯಾನ್ಸರ್ ಗುಣಪಡಿಸಬಹುದು. ಸೂಕ್ತ ಸಮಯದಲ್ಲಿ ಆರೋಗ್ಯ ತಪಾಸಣೆ ಮಾಡಿಕೊಂಡು ವೈದ್ಯರ ಸಲಹೆಯಿಂದ ಕ್ಯಾನ್ಸರ್ ರೋಗ ಮುಕ್ತಗೊಳಿಸಬಹುದು, ದೇಶದಲ್ಲಿ ಕ್ಯಾನ್ಸರ್ ರೋಗದಿಂದ ಲಕ್ಷಾಂತರ ಜನರು ಸಾವಿಗೀಡಾತ್ತಿದ್ದಾರೆ.

ಮುಂಜಾಗ್ರತೆಯಾಗಿ ಆರೋಗ್ಯದ ಮೇಲೆ ನಿಗಾವಹಿಸದ ಕಾರಣ ಮತ್ತು ಕ್ಯಾನ್ಸರ್ ಕುರಿತು ಮಾಹಿತಿ ಇಲ್ಲದೇ ಇರುವ ಕಾರಣ ಜನರು ಬಲಿಯಾಗುತ್ತಿದ್ದಾರೆ. ಆದರೆ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡಿ, ವೈದ್ಯಕೀಯ ಚಿಕಿತ್ಯೆ ಪಡೆದರೆ ಎಲ್ಲರಂತೆ ಜೀವನ ಸಾಗಿಸಬಹುದು. 9 ಜನರಲ್ಲಿ ಒಬ್ಬರಿಗೆ ಕ್ಯಾನ್ಸರ್ ರೋಗ ಇರುವುದು ಅಂಕಿಅಂಶ ತಿಳಿಸುತ್ತದೆ.

ಮೊದಲ, ಎರಡನೇಯ ಹಂತದಲ್ಲಿಯೇ ಕ್ಯಾನ್ಸರ್ ಪತ್ತೆ ಮಾಡಿದರೆ ಸುಲಭವಾಗಿ ರೋಗ ಗುಣಪಡಿಸುವ ಸಾಧ್ಯತೆ ಇದೆ. ಕ್ಯಾನ್ಸರ್ ರೋಗದಿಂದ ಮುಕ್ತರಾಗಲು ಆಹಾರ ಪದ್ಧತಿ ಮತ್ತು ಜೀವನಶೈಲಿ ಬದಲಾವಣೆ ಮಾಡಿಕೊಳ್ಳಬೇಕು. ಪ್ರತಿದಿನ ಯೋಗ, ವ್ಯಾಯಾಮ ಮತ್ತು ವಾಕಿಂಗ್ ಹಾಗೂ ಉತ್ತಮ ಆಹಾರ ಸೇವನೆ ಮಾಡಬೇಕು. ದೇಶದಲ್ಲಿ ಪ್ರತಿವರ್ಷ 10 ಲಕ್ಷ ಕ್ಯಾನ್ಸರ್‌ಪೀಡಿತರಾಗುತ್ತಿದ್ದಾರೆ.

ತೂಕ ಕಡಿಮೆ, ರಕ್ತಸ್ರಾವ, ಸತತವಾಗಿ ಜ್ವರ, ನೆಗಡಿ, ಕೆಮ್ಮು ಇದ್ದಲ್ಲಿ ವೈದ್ಯರಲ್ಲಿ ಬಂದು ತಪಾಸಣೆ ಮಾಡಿಸಿಕೊಳ್ಳಿ. ಪ್ರತಿ ಆರು ತಿಂಗಳಿಗೆ ಒಮ್ಮೆ ಸಂಪೂರ್ಣ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ಸಾರ್ವಜನಿಕರಿಗೆ ಕ್ಯಾನ್ಸರ್ ಕುರಿತು ಅರಿವು ಮೂಡಿಸಲು ಇಂದು ಕ್ಯಾನ್ಸರ್ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ನಂತರ ಕ್ಯಾನ್ಸರ್ ತಜ್ಞ ವೈದ್ಯೆ ಡಾ. ಸಮಯ್ಯ ಸನಾ ಮಾತನಾಡಿ ಸ್ತನದ ಕ್ಯಾನ್ಸರಿನ ಮೊದಲ ಲಕ್ಷಣವೆಂದರೆ ಸ್ತನದ ಯಾವುದೇ ಭಾಗದಲ್ಲಿ ರೂಪುಗೊಳ್ಳುವ ಗಡ್ಡೆ. ಮ್ಯಾಮೊಗ್ರಾಮ್ ಪರೀಕ್ಷೆಯ ಮೂಲಕ ಸ್ತನದ ಗಡ್ಡೆ ರೋಗಲಕ್ಷಣಗಳನ್ನು ಉಂಟುಮಾಡುವಷ್ಟು ದೊಡ್ಡದಾಗುವ ಮೊದಲು ಪತ್ತೆಹಚ್ಚಬಹುದು. ಗಡ್ಡೆಗಳು ಪೆನ್ಸಿಲ್‍ನ ತುದಿಯಷ್ಟು ಚಿಕ್ಕದಾಗಿರಬಹುದು (1 ಮಿಮೀ) ಅಥವಾ ಸ್ವಲ್ಪ (50 ಮಿಮೀ) ದೊಡ್ಡದಾಗಿರಬಹುದು. ಎಫ್‍ಎನ್‍ಎಸಿ ಪರೀಕ್ಷೆಯ ಮೂಲಕ ಸುಲಭವಾಗಿ ಇದನ್ನು ಪತ್ತೆ ಹಚ್ಚಬಹುದಾಗಿದೆ. ಇದು ಅತ್ಯಂತ ಸರಳ ಮತ್ತು ಕಡಿಮೆ ಖರ್ಚಿನಲ್ಲಿ ಮಾಡಿಸಿಕೊಳ್ಳುವ ಪರೀಕ್ಷೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಡಾ. ಮುಜ್ಜಮಿಲ್, ಡಾ. ರಿಜ್ವಾನ, ಶೋಭಾ ಮಠಪತಿ ಸೇರಿದಂತೆ ಆಸ್ಪತ್ರೆಯ ‌ವೈದ್ಯರು ಹಾಗೂ ಸಿಬ್ಬಂದಿಗಳು‌ ಉಪಸ್ಥಿತರಿದ್ದರು.

ಸ್ತನದ ಕ್ಯಾನ್ಸರ್ ಇದೆಯೇ ಎಂಬುದನ್ನು ಮಹಿಳೆಯರು ಸ್ವತ: ತಮ್ಮ ಸ್ತನ ಪ್ರದೇಶದಲ್ಲಿ ಪರೀಕ್ಷಿಸಿಕೊಳ್ಳಿ. ಮೂವತ್ತು ವರ್ಷ ಆಗಿರುವ ಮಹಿಳೆಯರು ಮುಟ್ಟಿನ ನಂತರ ಪ್ರತಿ ತಿಂಗಳಿಗೊಮ್ಮೆ ಸ್ನಾನದ ಸಮಯದಲ್ಲಿ ಒಂದು ಕೈಯನ್ನು ಮೇಲೆತ್ತಿ ಇನ್ನೊಂದು ಕೈಯಿಂದ ಸ್ತನದಲ್ಲಿ ಗಡ್ಡೆ ಇದೆಯೇ ಎಂಬುದನ್ನು ನಿಧಾನವಾಗಿ ಪರೀಕ್ಷೆ ಮಾಡಿಕೊಳ್ಳಬೇಕು. ಕನ್ನಡಿ ಮುಂದೆ ನಿಂತುಕೊಂಡು ಈ ಪರೀಕ್ಷೆಯನ್ನು ಮಾಡಿಕೊಳ್ಳಬಹುದು. – ಡಾ. ಸುಮಯ್ಯ ಸನಾ, ಖ್ಯಾತ ಕ್ಯಾನ್ಸರ್ ತಜ್ಞ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಕಲಬುರಗಿ.

ಸ್ತನ ಕ್ಯಾನ್ಸರ್ ವಂಶವಾಹಿಯಿಂದ ಬರಬಹುದಾದ ರೋಗವೆಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ. ತಾಯಿಯಿಂದ ಮಗಳಿಗೋ ಅಥವಾ ಅಜ್ಜಿಯಿಂದ ಮೊಮ್ಮಗಳಿಗೋ ಕ್ಯಾನ್ಸರ್ ಜೀನ್ ಹರಡಬಹುದು. ನಿಮ್ಮ ತಾಯಿಯ ಕುಟುಂಬ ವರ್ಗದಲ್ಲಿ ಯಾರಿಗಾದರೂ ಸ್ತನ ಕ್ಯಾನ್ಸರ್ ಇದ್ದರೆ ವಂಶವಾಹಿಯಿಂದ ಅದು ನಿಮಗೂ ತಗುಲುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲೇಬೇಕಾಗುತ್ತದೆ. ಹೀಗಿದ್ದ ಪಕ್ಷದಲ್ಲಿ ಆರು ತಿಂಗಳಿಗಾದರೂ ತಜ್ಞರ ಬಳಿ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ. – ಡಾ. ಅರುಣ ಬರದ, ಖ್ಯಾತ ಕ್ಯಾನ್ಸರ್ ತಜ್ಞ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಕಲಬುರಗಿ.

ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ತಪಾಸಣೆಗೆ ಅಗತ್ಯವುಳ್ಳ ಅತ್ಯಾಧುನಿಕ ಯಂತ್ರೋಪಕರಣಗಳ ಸೌಲಭ್ಯಗಳಿವೆ. ಸೂಜಿ ಪರೀಕ್ಷೆ, ಎಕ್ಸ್ ರೇ, ಸ್ಕ್ಯಾನಿಂಗ್‌, ಮೆಮೊಗ್ರಾಂ ಪರೀಕ್ಷೆಗೊಳಪಟ್ಟು, ಕ್ಯಾನ್ಸರ್‌ ದೃಢಪಟ್ಟಲ್ಲಿ ಕಿಮೊ ಥೆರಪಿ, ವಿಕಿರಣ ಚಿಕಿತ್ಸೆ, ಹಾರ್ಮೋನ್ ಚಿಕಿತ್ಸೆಗಳನ್ನು ಸೇರಿದಂತೆ ಎಲ್ಲಾ ರೀತಿಯ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಗಳನ್ನು ತಜ್ಞ ವೈದ್ಯರಿಂದ ರಿಯಾಯಿತಿ ದರದಲ್ಲಿ ಮಾಡುವ ಮೂಲಕ‌ ಬಡಜನರಿಗೆ ಅನೂಕೂಲ ಮಾಡಲು ನಿರ್ದರಿಸಲಾಗಿದೆ. – ಡಾ.ಫಾರುಕ್ ಅಹ್ಮದ ಮನ್ನೂರ, ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಕಲಬುರಗಿ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here