ಹೊನಗುಂಟಾ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಚಾರ ಆರೋಪ: ಪಿಡಿಓ ವಿರುದ್ಧ ಆಯುಕ್ತರಿಗೆ ದೂರು

0
233

ಶಹಾಬಾದ; ಹೊನಗುಂಟಾ ಗ್ರಾಮ ಪಂಚಾಯತಿಯಲ್ಲಿ 15 ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಭ್ರಷ್ಟಚಾರ, ಹಣ ದುರ್ಬಳಿಕೆ ಹಾಗೂ ತೆರಿಗೆ ವಸೂಲಿ ಮತ್ತು ಸಿಬ್ಬಂದಿ ವೇತನವನ್ನು ಅಕ್ರಮವಾಗಿ ಬಳಸಿಕೊಂಡ ಹೊನಗುಂಟಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಬೆಂಗಳೂರು ಕರ್ನಾಟಕ ಪಂಚಾಯತ ರಾಜ್ ಆಯುಕ್ತರಿಗೆ ಕರ್ನಾಟಕ ಪ್ರಾಂತ ರೈತ ಸಂಘ ಶಹಾಬಾದ್ ತಾಲ್ಲೂಕು ಅಧ್ಯಕ್ಷ ರಾಯಪ್ಪ ಹುರಮುಂಜಿ ದೂರು ನೀಡಿದ್ದಾರೆ.

ಶಹಾಬಾದ್ ತಾಲ್ಲೂಕಿನ ಹೊನಗುಂಟಾ ಗ್ರಾಮ ಪಂಚಾಯಿತಿಯಲ್ಲಿ ಸೆ.2023 ರಿಂದ ಆ.2024 ರ ವರಗೆ 15 ನೇ ಹಣಕಾಸು ಯೋಜನೆಯಡಿ ಅನುಮೋದಿತ ಕ್ರಿಯಾ ಯೋಜನೆ ಪ್ರಕಾರ ಕಾಮಗಾರಿಗಳಿಗೆ ಅನುದಾನ ಬಳಸದೆ ಸುಮಾರು. 18 ಲಕ್ಷ ರ ರೂಪಾಯಿಗಳ ಅಧಿಕ ಮೊತ್ತದ ಹಣ ಪಂಚಾಯತ ರಾಜ್ ನಿಯಮ ಉಲ್ಲಂಘನೆ ಮಾಡಿ ಬೇಕಾ ಬಿಟ್ಟಿ ಹಣ ಕೆಲವು ಏಜೆನ್ಸಿ ಗಳಿಗೆ ಪಿಡಿಓ ಅವರು ಅಕ್ರಮವಾಗಿ ಪಾವತಿಸಿದ್ದಾರೆ.

Contact Your\'s Advertisement; 9902492681

ಪಂಚಾಯಿತಿ ತೆರಿಗೆ ವಸೂಲಿ ಮತ್ತು ಸಿಬ್ಬಂದಿ ವೇತನದಲ್ಲಿ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ಸ್ವಚ್ಚತಾ ನೈರ್ಮಲ್ಯ ಹಾಗೂ ಕುಡಿಯುವ ನೀರು ನಿರ್ವಹಣೆ ಕಾಮಗಾರಿ ಹೆಸರಿನಲ್ಲಿ ಹಣ ಲೂಟಿ ಮಾಡಿದ್ದಾರೆ. ವಿದ್ಯುತ್ ಬಲ್ಪ್ ಖರೀದಿ ಮಾಡಿ, ಕಾನೂನು ಬಾಹಿರ ವಾಗಿ ತಮಗೆ ಬೇಕಾದ ವ್ಯಕ್ತಿಗಳ ಖಾತೆಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ. ಎಂದು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಿಗೆ ಬರೆದ ಪತ್ರದಲ್ಲಿ ರಾಯಪ್ಪ ಅವರು ದೂರಿದ್ದಾರೆ.

ಕಾಮಗಾರಿಗಳ ಟೆಂಡರ್ ಕರೆಯದೆ KTPP ಆಕ್ಟ್ ನಿಯಮ ಉಲ್ಲಂಘನೆ ಮಾಡಿ ಕಾಮಗಾರಿಗಳ ಹೆಸರಿನಲ್ಲಿ ಅಕ್ರಮವಾಗಿ ಹಣ ಪಾವತಿಸಲಾಗಿದೆ. ಇದರಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ಚರಂಡಿ ಸಮಸ್ಯೆ, ರಸ್ತೆ ಕಾಮಗಾರಿ ಸೇರಿದಂತೆ ಕನಿಷ್ಠ ಮೂಲ ಸೌಕರ್ಯಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ.

ಹೊನಗುಂಟಾ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ಭ್ರಷ್ಟಾಚಾರ ನಡೆಸಿದ ಪಿಡಿಒ ವಿರುದ್ಧ ಕ್ರಮ ಗೈಗೊಳ್ಳುವಂತೆ ಈಗಾಗಲೇ ಕಲ್ಬುರ್ಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಿಗೆ ಮತ್ತು ಶಹಾಬಾದ್ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ನೀಡಲಾಗಿದೆ.

ಆದರೂ ಇಲ್ಲಿವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ತಕ್ಷಣ ಪಿಡಿಓ ವಿರುದ್ಧ ಇಲಾಖೆ ತನಿಖೆ ನಡೆಸಿ ಸೇವೆಯಿಂದ ಅಮಾನತು ಮಾಡಬೇಕು. ಮತ್ತು ಅಧ್ಯಕ್ಷರ ವಿರುದ್ಧ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೇ ಧರಣಿ ಸತ್ಯಾಗ್ರಹ ಮಾಡಲಾಗುತ್ತದೆ. ಎಂದು ಆಯುಕ್ತರಿಗೆ ಬರೆದ ಪತ್ರದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಶಹಾಬಾದ್ ತಾಲೂಕು ಅಧ್ಯಕ್ಷ ರಾಯಪ್ಪ ಹುರಮುಂಜಿ ಎಚ್ಚರಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here