ಕಲಬುರಗಿ: ಇತ್ತೀಚೆಗೆ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಿವಾದಿತ ಕೃತಿ ” ವಾಲ್ಮೀಕಿ ಯಾರು? ನೀಡಿರುವುದನ್ನು ಹಿಂಪಡೆಯಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಸುಬೇದಾರ ಮನವಿ ಮಾಡಿದರು.
ಇಂದು ನಗರಕ್ಕೆ ಆಗಮಿಸಿದ್ದ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿ, ಕಾರ್ಯಕ್ರಮದಲ್ಲಿ ಈ ಕೃತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದರು. ಪ್ರತಿ ವರ್ಷ ನಡೆಯುವ ಕಾರ್ಯಕ್ರಮ ಒಂದೇ ರೀತಿಯಾಗಿ ಆಯೋಜಿಸಬೇಕು, ಕಾಣಿಕೆ ಹಾಗೂ ಗೌರವಧನ ಕೂಡ ಒಂದೇ ರೀತಿಯಾಗಿರಬೇಕು ಎಂದು ಅವರು ವಿನಂತಿಸಿಕೊಂಡರು.
ಈ ವೇಳೆಯಲ್ಲಿ ಸಂಘದ ಪದಾಧಿಕಾರಿಗಳು ಮುಖಂಡರು ಇದ್ದರು.