ಸುರಪುರ: ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ನೂತನ ಅಧ್ಯಕ್ಷರನ್ನಾಗಿ ನಾಗರಾಜ ನಾಯಕ (ರಾಜು ದರಬಾರಿ) ಅವರನ್ನು ನೇಮಿಸಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಬೊಮ್ಮನಹಳ್ಳಿ ತಿಳಿಸಿದ್ದಾರೆ.
ನಗರದ ಒಕ್ಕೂಟದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ನೇಮಕಗೊಳಿಸಿ ಘೋಷಿಸಿದರು. ಅಲ್ಲದೆ ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ನಾಗರಾಜ ನಾಯಕ (ರಾಜು ದರಬಾರಿ) ಅವರನ್ನು ಸನ್ಮಾನಿಸಿ ಗೌರವಿಸಿ ಎಲ್ಲರು ಅಭಿನಂಧಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ತಾಲೂಕ ಘಟಕದ ಅನೇಕ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.