ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಮೂಲಾಧಾರ: ಡಾ. ಸತ್ಯಂಪೇಟೆ

0
71

ಕಲಬುರಗಿ: ಇಂದಿನ ಕಾಲದಲ್ಲಿ ಪತ್ರಿಕೋದ್ಯಮದ ಮಹತ್ವವನ್ನು ಕಡೆಗಣಿಸುವಂತಿಲ್ಲ. ಇಂದಿನ ಆಧುನಿಕ ಯುಗದಲ್ಲಿ ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ಇದು ಸಮಾಜದಲ್ಲಿ ಮತ್ತು ಪ್ರಪಂಚದಾದ್ಯಂತ ನಡೆಯುತ್ತಿರುವ ಘಟನೆಗಳ ಬಗ್ಗೆ ಜನರಿಗೆ ತಿಳಿಹೇಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪತ್ರಕರ್ತ- ಸಾಹಿತಿ ಡಾ. ಶಿವರಂಜನ ಸತ್ಯಂಪೇಟೆ ಅಭಿಪ್ರಾಯಪಟ್ಟರು.

ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ಆರಂಭಿಸಲಾದ “ಪತ್ರಿಕೋದ್ಯಮ” ಮೌಲ್ಯವರ್ಧಿತ ಕೋರ್ಸ್ ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಮುಂದುವರಿದು ಮಾತನಾಡಿದ ಅವರು, ಇಂದಿನ ಡಿಜಿಟಲ್ ಯುಗವು ಮುಂದುವರಿದಂತೆ, ಪತ್ರಿಕೋದ್ಯಮವು ಕೆಲವು ನಿರ್ಣಾಯಕ ರೂಪಾಂತರಗಳನ್ನು ತನ್ನಲ್ಲಿ ಅಳವಡಿಸಿಕೊಂಡಿದೆ ಎಂದು ಹೇಳಿದರು.

ಸಂವಿಧಾನದ 4ನೇ ಅಂಗ ಎಂದೇ ಕರೆಯಲ್ಪಡುವ ಪತ್ರಿಕಾರಂಗ ಇಂದು ಉದ್ಯಮವಾಗಿ ಬೆಳೆದಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾದಿ ತಪ್ಪಿದಾಗ ಸರಿ ದಾರಿಗೆ ತರುವ ಕೆಲಸ ಮಾಡುವ ಪತ್ರಿಕಾರಂಗ ಇಂದು ಟಿ.ಆರ್.ಪಿ ಗೆ ಬೆನ್ನು ಬೀಳುತ್ತಿರುವುದಕ್ಕೆ ಖೇದ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವದ ಕಾವಲು ನಾಯಿಯಾಗಿರುವ ಪತ್ರಿಕಾರಂಗ ಇಂದು ಧನಾತ್ಮಕ ವಿಚಾರಗಳಿಗೆ ಮಹತ್ವ ಕೊಡಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ವಹಿಸಿಕೊಂಡು ಪತ್ರಿಕೋದ್ಯಮದ ಕುರಿತು ಆರಂಭವಾದ ಈ ಮೌಲ್ಯವರ್ಧಿತ ಕೋರ್ಸ್ ದಿಂದ ವಿದ್ಯಾರ್ಥಿಗಳಿಗೆ ಬಹಳ ಆವಶ್ಯಕವಾದ ಜ್ಞಾನ ದೊರಕಲಿದೆ ಎಂದು ನುಡಿದರು.

ವಿಭಾಗದ ಮುಖ್ಯಸ್ಥ ಡಾ. ಪ್ರೇಮಚಂದ ಚವ್ಹಾಣ ಅವರು ಸ್ವಾಗತ ಮತ್ತು ಪ್ರಾಸ್ತಾವಿಕ ಮಾತನಾಡಿದರು.ವಿಭಾಗದ ಉಪನ್ಯಾಸಕಿ ಕವಿತಾ ಠಾಕೂರ್ ನಿರೂಪಿಸಿದರು. ಸುಷ್ಮಾ ಕುಲಕರ್ಣಿ ವಂದಿಸಿದರು. ಸಾಕ್ಷಿ ಜೈನ್ ಪ್ರಾರ್ಥನಾಗೀತೆ ಹಾಡಿದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ. ಕೆ. ಪಾಟೀಲ, ಡಾ. ಮಹೇಶ ಗಂವ್ಹಾರ, ಡಾ. ಮೋಹನರಾಜ ಪತ್ತಾರ, ಶಿವಲೀಲಾ ಧೋತ್ರೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here