ಒಳ ಮೀಸಲಾತಿ ಜಾರಿ ವಿರೋಧಿಸಿ ಕುಳುವ ಮಹಾಸಂಘ ಸುದ್ದಿಗೋಷ್ಠಿ

0
36

ಸುರಪುರ: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ಸರ್ವೋಚ್ಚ ನ್ಯಾಯಾಲಯದ ಸಪ್ತಪೀಠವು ತೀರ್ಪು ನೀಡಿದ್ದು ಸರಿಯಷ್ಟೇ,ಆದರೆ ಈ ಬಗ್ಗೆ ರಾಜ್ಯ ಸರಕಾರ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತಾಗಿ ಅವೈಜ್ಞಾನಿಕ,ಅತಾರ್ಕಿಕ ಹಾಗೂ ಅಸಮರ್ಥನೀಯ ದತ್ತಾಂಶಗಳನ್ನು ಆಧರಿಸಿ ಒಳ ಮೀಸಲಾತಿ ಜಾರಿಗೆ ಮುಂದಾಗಿರುವುದು ಸಾಮಾಜಿಕ ನ್ಯಾಯದ ಕಗ್ಗೊಲೆಯಾಗಿದೆ ಎಂದು ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ಜಿಲ್ಲಾ ಮುಖಂಡ ಭೀಮರಾಯ ಭಜಂತ್ರಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ಪರಿಶಿಷ್ಟ ಜಾತಿಯ 101 ಸಮುದಾಯಗಳ ಸಾಮಾಜಿಕ,ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಕುರಿತಾದ ಸಮಗ್ರ ಹಾಗೂ ವಸ್ತುನಿಷ್ಟ ಅಂಕಿ-ಅಂಶಗಳ ಕುರಿತಾದ ಕೊರತೆ ಇದ್ದು,ಈ ಬಗ್ಗೆ ವೈಜ್ಞಾನಿಕ ಅಧ್ಯಯನ ಕೈಗೊಳ್ಳದೆ ಕೆಲವು ಪಟ್ಟಭದ್ರರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಏಕಾಏಕಿ ಒಳ ಮೀಸಲಾತಿ ಜಾರಿಗೆ ಏಕಪಕ್ಷಿಯ ನಿರ್ಧಾರಗಳನ್ನು ಕೈಗೊಳ್ಳಲು ಹೊರಟಿರುವ ರಾಜ್ಯ ಸರಕಾರದ ನಡೆಯನ್ನು ಅಖಿಲ ಕರ್ನಾಟಕ ಕುಳುವ ಮಹಾ ಸಂಘ ಖಂಡಿಸುತ್ತದೆ.ಅಲ್ಲದೆ ಒಳ ಮೀಸಲಾತಿ ಜಾರಿಗೊಳಿಸುವ ಮುನ್ನ ಸಮರ್ಥನೀಯ,ಹಾಗೂ ವೈಜ್ಞಾನಿಕ ದತ್ತಾಂಶ ಕ್ರೂಢಿಕರಿಸಿ ವಿಶ್ಲೇಷಿಸಿ ತಜ್ಞರ ವರದಿಯನ್ನು ಪಡೆದುಕೊಳ್ಳದ ಹೊರತು ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಬಾರದು.

Contact Your\'s Advertisement; 9902492681

ಅವಕಾಶ ವಂಚಿತ ಅಲೆಮಾರಿ,ಕೊರಮ-ಕೊರಚ-ಕೊರವ ಸಮುದಾಯಗಳ ಪರವಾಗಿ ಅಖಿಲ ಕರ್ನಾಟಕ ಕುಳುವ ಮಹಾಸಂಘ ಪತ್ರಿಕಾ ಗೋಷ್ಠಿ ಮೂಲಕ ಒತ್ತಾಯಿಸುತ್ತದೆ ಎಂದು ತಿಳಿಸಿ,2011ರ ಜನಗಣತಿಯ ಅಂಕಿಅಂಶ,ಆರ್ಥಿಕ,ಶೈಕ್ಷಣಿಕ ಸಮೀಕ್ಷೆ ಹಾಗೂ 2016ರ ಕಾಂತರಾಜು ಆಯೋಗದ ವರದಿ ಕೂಡಲೇ ಜಾರಿಗೊಳಿಸಬೇಕು.101 ಜಾತಿಗಳ ಅಹವಾಲು ಮುಕ್ತವಾಗಿ ಆಲಿಸಿ,ಆ ಸಮುದಾಯಗಳ ಮುಖಂಡರ ಸಂಘ-ಸಂಸ್ಥೆಗಳ ಮುಖಂಡರ,ಚಿಂತಕರೊಂದಿಗೆ ಸಮಾಲೋಚನೆ ನಡೆಸಬೇಕು.

101 ಪರಿಶಿಷ್ಟ ಜಾತಿಗಳ ಪೈಕಿ 51 ಜಾತಿಗಳಿಗಳು ಗುರುತಿಸಲ್ಪಟ್ಟ ಅಲೆಮಾರಿ ಮತ್ತು ವಿಮುಕ್ತ ಸಮುದಾಯಗಳಾಗಿದ್ದು ಇವುಗಳ ಸಾಮಾಜಿಕ ಹಿಂದುಳಿದಿರುವಿಕೆ,ಶೈಕ್ಷಣಿಕ,ಔದ್ಯೋಗಿಕ,ರಾಜಕೀಯ ಮೀಸಲಾತಿ ಪ್ರಾತಿನಿಧ್ಯ ಕುರಿತಾಗಿ ದತ್ತಾಂಶಗಳನ್ನು ಕ್ರೂಢಿಕರಿಸಿ ಕಾನೂನು ತಜ್ಞರ ಸಮಿತಿ ರಚಿಸಿ ಸಲಹೆ ಪಡೆಯಬೇಕು ಇದನ್ನು ಮಾಡದೆ ಒಂದು ವೇಳೆ ಸರಕಾರ ಒಳ ಮೀಸಲಾತಿ ಜಾರಿಗೆ ಮುಂದಾದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಸರಕಾರಕ್ಕೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಹಾ ಸಂಘದ ಮುಖಂಡರಾದ ಮಲ್ಲಿಕಾರ್ಜುನ ಭಜಂತ್ರಿ ಸುರಪುರ,ಮಹೇಶಕುಮಾರ ಭಜಂತ್ರಿ,ಮಷ್ಯಪ್ಪ ರಂಗಂಪೇಟೆ,ಸುಂಕಪ್ಪ ರಂಗಂಪೇಟೆ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here