ಕಲಬುರಗಿ: ಇಲ್ಲಿನ ಮಹಾದೇವಿ ನಾದ ಮಧುರ ಸಾಹಿತ್ಯ ಸಾಂಸ್ಕ್ರತಿಕ ಕಲಾ ಸಂಸ್ಥೆ ಹಾಗೂ ಮೆ.ಮಹಾದೇವಿ ಎನ್.ಮುರುಡಿ ಪ್ರಕಾಶನ ಕಲಬುರಗಿ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ಅಕ್ಟೋಬರ್ 26 ಶನಿವಾರರಂದು ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಪರ ಹೋರಾಟಗಾರ ಲಿಂಗರಾಜ ಸಿರಗಾಪೂರ ಅವರನ್ನು ಕನ್ನಡ ನುಡಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಂ.ಬಿ.ನಿಂಗಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿರುವ ಎರಡು ಸಂಸ್ಥೆಗಳ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಿರಗಾಪೂರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.ಸಿರಗಾಪೂರ ಅವರು ಕಳೆದ 20 ವರ್ಷಗಳಿಂದ ನಿರಂತರ ಕನ್ನಡ ನಾಡು,ನುಡಿ,ನೆಲ,ಜಲ ಉಳಿವಿಗಾಗಿ ಶ್ರಮಿಸುತ್ತಿದ್ದಾರೆ.ಇವರ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.