ಕಲಬುರಗಿ: ಕಲ್ಯಾಣ ಕರ್ನಾಟಕ ಸಾಮಾಜಿಕ ಸುಧಾರಣೆಗಳ ಐಕಾನ್ ಶೈಕ್ಷಣಿಕ ಕ್ರಾಂತಿಗೆ ಶ್ರಮಿಸಿದ ಪ್ರಸಿದ್ಧ ಸೂಫಿ ಸಂತ ಮತ್ತು ಖ್ವಾಜಾ ಬಂದೇನವಾಜ್ ದರ್ಗಾದ ಪೀಠಾಧಿಪತಿ ಹಾಗೂ ಟ್ರಸ್ಟ್ನ ಅಧ್ಯಕ್ಷ ಹಾಗೂ ಡಾ. ಸೈಯದ್ ಶಾ ಖುಸ್ರೋ ಹುಸೇನಿ ಅವರ ನಿಧನಕ್ಕೆ ಕರ್ನಾಟಕ ಮಾಧ್ಯಮ ಅಕಡಮಿಯ ಅಧ್ಯಕ್ಷರಾದ ಆಯೇಷಾ ಖಾನಮ್ ಅವರು ಸಂತಾಪ ಸೂಚಿಸಿದ್ದಾರೆ.
ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಮಹಿಳಾ ಸಬಲೀಕರಣಕ್ಕೆ ಅಪಾರವಾದ ಕುಡುಗೆ ನೀಡಿದ ಅವರು ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ, ಅವರು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿದರು, ಅಸಂಖ್ಯಾತ ವ್ಯಕ್ತಿಗಳಿಗೆ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಖ್ವಾಜಾ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾಗಿ ಮತ್ತು ಖ್ವಾಜಾ ಬಂದನವಾಜ್ ವಿಶ್ವವಿದ್ಯಾಲಯದ ಕುಲಪತಿಯಾಗಿದ ಅವರು ಸಮಾಜಿ ಬದಲಾವಣೆ ಮತ್ತು ಸೂಫಿ ಪರಂಪರೆಯ ಮೂಲಕ ಸಮಾಜದಲ್ಲಿ ಬದಲಾವಣೆಯ ಸೇತುವೆಯಾಗಿ ಕೆಲಸ ಮಾಡಿ ಯಶಸ್ಸನ್ನು ಕಂಡಿದ್ದಾರೆ ಎಂದು ಬಣ್ಣಿಸಿದ್ದಾರೆ.
ಪುಜ್ಯರ ಅಂತ್ಯಕ್ರಿಯೆ ಗುರುವಾರ ( ಬಾದ್ ಮಗರಿಬ್) ಸಂಜೆ 6 ಗಂಟೆ ಸುಮಾರಿಗೆ ಖಾಜಾ ಬಂದನವಾಜ್ ದರ್ಗಾದ ಆವರಣದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಅಂತ್ಯಕ್ರಿಯೆ ನೆರವೆರಲಿದೆ.