ಶಹಾಪುರ: ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಭಾಗದ ಮಹಿಳೆಯರ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಶ್ರೀ ಧರ್ಮಸ್ಥಳ ಮಂಜುನಾಥ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಶಹಾಪುರದ ವಿಶ್ವಕರ್ಮ ಏಕದ೦ಡಗಿ ಮಠದ ಪೂಜ್ಯರಾದ ಕಾಳಹಸ್ತೇಂದ್ರ ಮಾಹಾಸಾಮಿಗಳು.ಹೇಳಿದರು .
ಗೋಗಿಯ ಕೃಷ್ಣ ಯಾದವ ಸಮುದಾಯ ಭವನದಲ್ಲಿ ಶ್ರೀ ಧರ್ಮಸ್ಥಳ ಮ೦ಜುನಾಥ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಹಮ್ಮಿಕೊ೦ಡಿರುವ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ,ಧಾರ್ಮಿಕ ಸಭೆ ಹಾಗೂ ಒಕ್ಕೂಟಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸ್ವ ಉದ್ಯೋಗ ಅವಲಂಬಿತ ಮಹಿಳೆಯರು ಧರ್ಮಸ್ಥಳ ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಜಿಲ್ಲಾ ಪಂಚಾಯಿತಿ ಸದಸ್ಯ ಕಿಶನ್ ರಾಥೋಡ್ ಮಾತನಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕರಾದ ಶಿವರಾಯ ಪ್ರಭು ಮಾತನಾಡಿ ಬಡವರ ಬಾಳಗೆ ಬೆಳಕು ನೀಡುವ ನಿಟ್ಟಿನಲ್ಲಿ ವಿರೇ೦ದ್ರ ಹೆಗ್ಗಡೆಯವರು ಮಹಾದಾಸೆಯಾಗಿದೆ ಎಂದು ಹೇಳಿದರು.
ಈ ಸಮಾರಂಭದ ವೇದಿಕೆಯ ಮೇಲೆ ವಿಶ್ವಕರ್ಮ ಸಮಾಜದ ಮುಖ೦ಡರಾದ ದೇವೇಂದ್ರಪ್ಪ ಕನ್ಯಾಕೊಳುರ. ಗ್ರಾಮದ ಹಿರಿಯರಾದ ಬಸವರಾಜಪ್ಪ ಗೌಡ ಗೋಗಿ, ಸೈಯದ ಮಹಮ್ಮದ್ ಹುಸೇನಿ,ಸೈಯದ್ ಮಹಮದ್ ಇಸ್ಮಾಯಿಲ್ .ಚಂದಪ್ಪ ತಾಯಮಗೋಳ,ಬಸವರಾಜ ಸಗರ,ಪಿಎಲ್ಡಿ ಬ್ಯಾಂಕಿನ ನಿರ್ದೇಶಕರಾದ ಮಾಣಿಕ್ ರೆಡ್ಡಿ ಶಿರಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶ್ರೀಮತಿ ಚೆನ್ನಮ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ರಜಿಯಾ ಹಾಗೂ ಹಾಗೂ ಶ್ರೀಮತಿ ಸಾಬಮ್ಮ ದೇಸಾಯಿ ಇತರರು ಉಪಸ್ಥಿತರಿದ್ದರು.