ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃಧ್ಧಿ ಸಂಸ್ಥೆಯಿಂದ ವಿಕಲಚೇತನರಿಗೆ ಸಲಕರಣೆ ವಿತರಣೆ

0
64

ಸುರಪುರ: ತಾಲೂಕಿನ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸ್ವಾವಲಂಬನೆ ಹೀಗೆ ಹತ್ತಾರು ಜನಪರ ಸುಧಾರಣೆಗೆ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯು ತಾಲೂಕಿನಲ್ಲಿ ಅನೇಕ ಜನಪರ ಒಳಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅದನ್ನು ಅನುಷ್ಠಾನ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಶೀಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃಧ್ಧಿ ಸಂಸ್ಥೆಯ ಕಲಬುರ್ಗಿ ಪ್ರಾದೇಶಿಕ ನಿರ್ದೇಶಕ ಶಿವರಾಯ ಪ್ರಭು ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ೧೧ ವರ್ಷಕ್ಕೊಮ್ಮೆ ನಡೆಯುವ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಸಂದರ್ಭ ಜನಮಂಗಲ ಕಾರ್ಯಕ್ರಮದಡಿ ನಿರ್ಗತಿಕ ವಿಕಲಚೇತನರಿಗೆ ಉಚಿತವಾಗಿ ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಪೂಜ್ಯ ಡಾ. ಡಿ. ವಿರೇಂದ್ರ ಹೆಗ್ಗಡೆಯವರ ನಿರ್ದೇನದಂತೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ೨೦೧೯-೨೦ ನೇ ಸಾಲಿನಲ್ಲಿ ಶ್ರೀ ಕ್ಷೇತ್ರದಿಂದ ಸುರಪುರ ತಾಲೂಕಿನ ೮ ವಲಯದಲ್ಲಿ ಒಟ್ಟು ೧೬ ಜನ ಫಲಾನುಭವಿಗಳು ಆಯ್ಕೆಗೊಳಿಸಿ ವಿಕಲಚೇತನರಿಗೆ ಸಲಕರಣೆಗಳನ್ನು ಹಾಗು ವಾಟರ್‌ಬೆಡ್, ಯೂ ಶೇಫ್ ವಾಕರ್, ಬೇಸಿಕ್ ವೀಲ್ ಚೇರ್, ಸಿಂಗಲ್ ಲೆಗ್ ವಾಕಿಂಗ್ ಸ್ಟೀಕ್‌ಗಳನ್ನು ನೀಡಲಾಗುತ್ತಿದೆ ಎಂದರು. ಪ್ರಸ್ತುತ ಈ ಕಾರ್ಯಕ್ರಮದಲ್ಲಿ ಆಯ್ಕೆಯಾದ ಫಲಾನುಭವಿಗಳನ್ನು ಸುರಪುರ ತಾಲೂಕಿನ ಯೋಜನಾ ಕಛೇರಿಯಲ್ಲಿ ಕಾರ್ಯಕ್ರಮ ಮಾಡಿ ಸಾಮೂಹಿಕವಾಗಿ ಸಲಕರಣೆಗಳನ್ನು ವಿತರಣೆ ಮಾಡಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ್, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಸಂದೀಪ್.ಡಿ ಮತ್ತು ಕಛೇರಿಯಲ್ಲಿನ ಎಲ್ಲಾ ಸಿಬ್ಬಂದಿಗಳು ಹಾಗೂ ಫಲಾನುಭವಿಗಳ ಪೊಷಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here