ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

0
9

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ, ಸಾಮಾಜಿಕ, ಸಾಂಸ್ಕøತಿಕ ಹಾಗೂ ಆಧ್ಯಾತ್ಮಿಕವಾದ ಸರ್ವಾಂಗೀಣ ಬೆಳವಣಿಗೆಯೇ ನಿಜವಾದ ಶಿಕ್ಷಣ ಎಂಬ ಪರಿಕಲ್ಪನೆಯೊಂದಿಗೆ ಆರು ದಶಕಗಳಿಂದ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಹಾಗೂ ಉಪನಿರ್ದೇಶಕರು, ಜಿಲ್ಲಾ ಮಟ್ಟದ ಪದವಿ-ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಸಾಂಸ್ಕ್ರತಿಕ ಚಟುವಟಿಕೆ ಸ್ಪರ್ಧೆಗಳನ್ನು 21 ರಂದು ಎಂ.ಪಿ.ಎಚ್.ಎಸ್. ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

Contact Your\'s Advertisement; 9902492681

ಈ ಸ್ಪರ್ಧೆಗಳಲ್ಲಿ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಭಾಗವಹಿಸಿ ಜಿಲ್ಲಾಮಟ್ಟದ ಚರ್ಚಾಸ್ಪರ್ಧೆಯಲ್ಲಿ ಕುಮಾರಿ ಫಾಯಜಾ ಖಾನಂ (ದ್ವಿತೀಯ ಕಲಾ ವಿಭಾಗ) ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ. ಕುಮಾರಿ ಹುದಾ (ಪ್ರಥಮ ವಾಣಿಜ್ಯ ವಿಭಾಗ) ತೃತೀಯ ಬಹುಮಾನ ಪಡೆದಿರುತ್ತಾರೆ. ಫೈನ್ ಆರ್ಟನಲ್ಲಿ ಕುಮಾರಿ ಅಮುಲ್ಯಾ (ಪ್ರಥಮ ಕಲಾ ವಿಭಾಗ) ದ್ವಿತೀಯ ಬಹುಮಾನ ಪಡೆದಿರುತ್ತಾರೆ. ಆಶುಭಾಷಣ ಸ್ಪರ್ಧೆಯಲ್ಲಿ ಕುಮಾರಿ ಮದಿಹಾ ರಜಾ (ದ್ವಿತೀಯ ಕಲಾ ವಿಭಾಗ) ದ್ವಿತೀಯ ಬಹುಮಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅದ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಡಾ.ಮೋಹನರಾಜ ಪತ್ತಾರ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳ ಸಂಯೋಜಕರಾದ ಶ್ರೀಮತಿ ಶೈಲಜಾ ನಾಕೆದಾರ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಉಪನ್ಯಾಸಕರಾದ ಡಾ. ಕಾಶಿಬಾಯಿ ಭೋಗಶಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here