ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ ಬಿಜೆಪಿ ಪಕ್ಷದ ವತಿಯಿಂದ ಸಂವಿಧಾನ ದಿನ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಭಾರತದ ಪ್ರಜೆಗಳಾದ ನಾವು ಒಂದು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಸ್ವೀಕರಿಸಿದ್ದು, ಎಲ್ಲ ಪ್ರಜೆಗಳಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ದೊರಕಬೇಕು. ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ‍್ಯವಿದೆ. ಎಲ್ಲರಿಗೂ ನಮ್ಮ ಧರ್ಮಕ್ಕೆ ಅನುಗುಣವಾದ ಆರಾಧನೆಗೂ ಅವಕಾಶವಿದೆ. ಎಲ್ಲ ಸ್ಥಾನಮಾನಗಳನ್ನು ಪಡೆಯಲು ಸ್ವಾತಂತ್ರ‍್ಯವಿದೆ. ಆದರೆ ರಾಷ್ಟ್ರೀಯ ಏಕತೆ, ಸಮಗ್ರತೆಯನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿಯೂ ನಮ್ಮದಾಗಬೇಕಾಗಿದೆ ಎಂದರು.
ವಿಶ್ವದ ಸರ್ವಶ್ರೇಷ್ಠ ತತ್ವಜ್ಞಾನಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿಕ್ಕಾಗಿಯೇ ಭಾರತೀಯ ಸಂವಿಧಾನ ಜಗತ್ತಿನ ಅತ್ಯುನ್ನತ ಸಂವಿAಧನವಾಗಿ ಎಲ್ಲರಿಗೂ ಮಾದರಿಯಾಗಿದೆ. ವಿಶ್ವದ ಎಲ್ಲಾ ಸಂವಿಧಾನಗಳನ್ನು ಅಧ್ಯಯನ ಮಾಡಿ, ದೇಶದ ಎಲ್ಲಾ ಧರ್ಮ ಮತ್ತು ಸಂಸ್ಕಾರಗಳನ್ನು ತಿಳಿದುಕೊಂಡು ಕಟ್ಟ ಕಡೆಯ ವ್ಯಕ್ತಿಗೂ ಸಮಾನ ಅವಕಾಶ ನೀಡಿದ್ದಾರೆ ಎಂದು ಹೇಳಿದರು.
ಈ ಸಂಧರ್ಬದಲ್ಲಿ ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ, ತಾಲ್ಲೂಕ ಎಸ್.ಸಿ ಮೂರ್ಚಾ ಅಧ್ಯಕ್ಷ ರಾಜು ಮುಕ್ಕಣ್ಣ, ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಯುವ ಮೂರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಮುಖಂಡರಾದ ರಾಮಚಂದ್ರ ರಡ್ಡಿ, ಗಿರಿಮಲ್ಲಪ್ಪ ಕಟ್ಟಿಮನಿ, ಸಿದ್ದಣ್ಣ ಕಲ್ಲಶೆಟ್ಟಿ, ಶಿವಶಂಕರ ಕಾಶೆಟ್ಟಿ, ಕಿಶನ ಜಾಧವ್, ಅಂಬದಾಸ ಜಾಧವ, ರಿಚರ್ಡ್ ಮಾರೆಡ್ಡಿ, ಹರಿ ಗಲಾಂಡೆ, ಆನಂದರಾವ ಡೌವಳೆ, ಆನಂದ ಇಂಗಳಗಿ, ಮಲ್ಲಿಕಾರ್ಜುನ ಸಾತಖೇಡ, ಸತೀಶ್ ನಾಯಕ, ಪ್ರೇಮ ರಾಠೊಡ, ನಾರಯಣ ರಾಠೊಡ, ನಾಗಣ್ಣ ಕಮರವಾಡಿ ಇತರರು ಇದ್ದರು.