ಸುರಪುರ: ಈಗಾಗಲೇ ರಾಜ್ಯದಲ್ಲಿ ಉತ್ತಮವಾಗಿ ಮಳೆ ಬೀಳುತ್ತಿದೆ ಅಲ್ಲದೆ ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದ ಆಲಮಟ್ಟಿ ಹಾಗೂ ನಾರಾಯಣಪುರ ಬಸವಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹರಿಸಲಾಗುತ್ತದೆ ಆದ್ದರಿಂದ ಕೂಡಲೇ ಸರಕಾರ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಹಿಂಗಾರು ಬೇಸಿಗೆ ಬೆಳೆಗೆ ರೈತರಿಗೆ ನೀರು ಒದಗಿಸುವ ಬಗ್ಗೆ ಘೋಷಣೆ ಮಾಡಬೇಕೆಂದು ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ್ ವಜಾಹತ್ ಹುಸೇನ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಸುರಪುರ ತಶಿಲ್ದಾರ ಮೂಲಕ ಮನವಿ ಸಲ್ಲಿಸಿದ್ದು ಈಗಾಗಲೇ ಹಿಂದೆ ಬಂದ ಪ್ರವಾಹದಿಂದ ತಾಲೂಕಿನ ಸಾವಿರಾರು ರೈತರು ಸಂಕಷ್ಟಕ್ಕೆ ಒಳಗಾಗಿದ್ದು ಕೂಡಲೇ ರೈತರಿಗೆ ಪರಿಹಾರ ಒದಗಿಸಬೇಕು ಹಾಗೂ ಬದುಕು ಕಳೆದುಕೊಂಡ ಜನರಿಗೆ ಮನೆ ನಿರ್ಮಿಸಿ ಕೊಡುವುದರ ಜೊತೆಗೆ ಅವರ ಉಪಜೀವನಕ್ಕೆ ಪರಿಹಾರ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಗ್ರೇಡ್-೨ ತಹಸೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಸಂಗಣ್ಣ ಬಾಕ್ಲಿ ಮುಖಂಡರಾದ ವಿನಾಯಕ ಬಳಿಚಕ್ರ ಶಾಂತು ತಳವಾರಗೇರಾ ತಿಪ್ಪಣ್ಣ ಪಾಟೀಲ್ ಶೌಕತ್ ಅಲಿ ಅಲ್ತಾಫ್ ಸಗರಿ ಇತರರಿದ್ದರು.