ಬೆಂಗಳೂರು: ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ಬೆಳೆಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ 'ಬೆಳೆಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು
— H D Kumaraswamy (@hd_kumaraswamy) November 4, 2019
ಇನ್ನೂ ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು ಎಂದು ತಿಳಿಸಿದ್ದಾರೆ.