ಗುಲ್ಬರ್ಗಾ ವಿ.ವಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 13ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ

0
536

ಕಲಬುರಗಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕಲಬುರಗಿ ವಿಭಾಗ (ಕಲ್ಯಾಣ ಕರ್ನಾಟಕ ಪ್ರದೇಶದ)ದ ಕನ್ನಡ ಸೃಜನ, ಸೃಜನೇತರ ಲೇಖಕರ ಕೃತಿಗಳಿಗೆ, ಜೀವನ ಕಥನ ಹಾಗೂ ಕನ್ನಡ ಪುಸ್ತಕ ಪ್ರಕಾಶಕರಿಗೆ, ಅನುವಾದ ಲೇಖಕರ ಕೃತಿಗೆ, ಸಮಾಜ ವಿಜ್ಞಾನ, ಜನಪದ ಕಲಾವಿದರಿಗೆ, ಚಿತ್ರ/ಶಿಲ್ಪಕಲಾವಿದರಿಗೆ, ಹಿಂದಿ, ಮರಾಠಿ, ಇಂಗ್ಲಿಷ ಹಾಗೂ ಉರ್ದು ಭಾಷಾ ಲೇಖಕರಿಗೆ ಗೌರವಧನ ನೀಡಿ ಪ್ರೋತ್ಸಾಹಿಸುವುದಲ್ಲದೆ, ರಾಜ್ಯಮಟ್ಟದ ವಿಜ್ಞಾನ ಪುಸ್ತಕ ಮತ್ತು ದಿ. ಜಯತೀರ್ಥ ರಾಜ ಪುರೋಹಿತ ಸ್ಮಾರಕ ರಾಜ್ಯ ಮಟ್ಟದ ಕನ್ನಡ ಕಥಾ ಸ್ಪರ್ಧೆಗಳಲ್ಲಿ ವಿಜೇತ ರಾದವರಿಗೆ ನೀಡುವ ಬಹುಮಾನ ಫಲತಾಂಶ ಪ್ರಕಟಿಸಿದೆ.

Contact Your\'s Advertisement; 9902492681

ಕನ್ನಡ ಹಾಗೂ ವಿವಿಧ ಭಾಷಾ ಪುಸ್ತಕ ಲೇಖಕರಿಗೆ, ಜನಪದ ಕಲಾವಿದರಿಗೆ, ಜೀವನ ಕಥನ, ಸಮಾಜ ವಿಜ್ಞಾನ, ಚಿತ್ರ/ಶಿಲ್ಪಕಲಾವಿದರಿಗೆ, ಪ್ರಕಾಶಕರಿಗೆ ೫೦೦೦/- ರೂಪಾಯಿ ಗೌರವಧನ ಪ್ರಮಾಣ ಪತ್ರ ಹಾಗೂ ಸ್ಮರಣಿಕೆ ಕೊಡಲಾಗುವುದು. ಅದರಂತೆ ರಾಜ್ಯಮಟ್ಟದ ವಿಜ್ಞಾನ ಪುಸ್ತಕಕ್ಕೆ ಗೌರವಧನದ ಜೊತೆಗೆ ಸ್ಮರಣಿಕೆ, ಪ್ರಮಾಣ ಪತ್ರ ನೀಡುವುದು ಹಾಗೂ ದಿ. ಜಯತೀರ್ಥ ರಾಜಪುರೋಹಿತ ಸ್ಮಾರಕ ರಾಜ್ಯ ಮಟ್ಟದ ಸಣ್ಣ ಕಥಾ ಸ್ಪರ್ಧೆಯಲ್ಲಿ ಪ್ರಶಸ್ತಿ ವಿಜೇತರಿಗೆ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕದೊಂದಿಗೆ ಕ್ರಮವಾಗಿ ತಲಾ ೫೦೦೦/- ೩,೦೦೦/- ಹಾಗೂ ೨,೦೦೦/- ರೂಪಾಯಿ ಗೌರವಧನ ಹಾಗೂ ಸ್ಮರಣಿಕೆ ಕೊಡಲಾಗುವುದು ಎಂದು ಪ್ರಸಾರಾಂಗದ ನಿರ್ದೇಶಕ ಪ್ರೊ. ಎಚ್. ಟಿ. ಪೋತೆ ತಿಳಿಸಿದ್ದಾರೆ.

12 ರಂದು ವಿಶ್ವವಿದ್ಯಾಲಯದ ಕಾರ್ಯಸೌಧದ ’ಮಹಾತ್ಮಾಗಾಂಧಿ ಸಭಾಂಗಣದಲ್ಲಿ’ಆಚರಿಸಲಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕುಲಪತಿಗಳಾದ ಪ್ರೊ. ಪರಿಮಳಾ ಅಂಬೇಕರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here