ನವದೆಹಲಿ: ಅಯೋಧ್ಯೆ ವಿವಾದ ಪ್ರಕರಣದ ಸುಪ್ರೀಂಕೋರ್ಟ್‌ನ ಐದು ನ್ಯಾಯಮೂರ್ತಿಗಳ ಪಂಚಪೀಠ ಸರ್ವಾನುಮತದಿಂದ ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವ ವಹಿಸಿದ್ದ ಪೀಠದಲ್ಲಿ ಎಸ್.ಎ.ಬೊಬ್ಡೆ, ಧನಂಜಯ್ ಚಂದ್ರಚೂಡ್, ಎಸ್.ಅಬ್ದುಲ್ ನಜೀರ್ ಮತ್ತು ಅಶೋಕ್ ಭೂಷಣ್ ನ್ಯಾಯಮೂರ್ತಿಗಳು ಒಳಗೊಂಡ ತೀರ್ಪು ಪ್ರಕಟಸಿದೆ.
ಸುಪ್ರೀ ತೀರ್ಪು: ಅಯೋಧ್ಯೆ ವಿವಾದಿತ ಸ್ಥಳವನ್ನು ಮಂದಿರ ನಿರ್ಮಾಣಕ್ಕೆ ಬಿಟ್ಟು ಕೊಡಬೇಕು, ಮತ್ತು ಇದಕ್ಕೆ ಪ್ರತಿಯಾಗಿ ಮಸೀದಿಯನ್ನು ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ ಅಯೋಧ್ಯದಲ್ಲೆ ಐದು ಎಕರೆ ಸೂಕ್ತ ಜಮೀನನ್ನು ಬೇರೆ ಕಡೆ ನೀಡಬೇಕು ಎಂದು ತೀರ್ಪಿನಲ್ಲಿ ಸುಪ್ರೀ ಕೋರ್ಟ್ ಉಲ್ಲೇಖಿಸಲಾಗಿದೆ.
ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಮೂರು ತಿಂಗಳ ಒಳಗೆ ಟ್ರಸ್ಟ್ ರೂಪಿಸಬೇಕು ಎಂಬ ಸ್ಪಷ್ಟ ನಿರ್ದೇಶನ ನೀಡಿದೆ ನೀಡೆಇದೆ.
2010ರಲ್ಲಿ ಇದೇ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು ತಳ್ಳಿಹಾಕಿದೆ. ರಾಮ್ ಲಲ್ಲಾ, ನಿರ್ಮೋಹಿ ಅಖಾಡಾ ಮತ್ತು ಸುನ್ನಿ ವಕ್ಫ್ ಬೋರ್ಡ್ ಗೆ ವಿವಾದಿತ ಜಾಗವನ್ನು ಅಲಹಾಬಾದ್ ಹೈಕೋರ್ಟ್ ಸಮನಾಗಿ ಹಂಚಿಕೆ ಮಾಡಿತ್ತು.