ಮಾನ್ವಿ: ನಗರದ ಬಸವ ವೃತ್ತದಲ್ಲಿ ಹೈದರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟದ ತಾಲೂಕು ಸಮಿತಿಯಿಂದ ರಾಯಚೂರಿನ ನವೋದಯ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅವರ ಅತ್ಯಾಚಾರವನ್ನು ಮತ್ತು ಕೊಲೆಯನ್ನು ಖಂಡಿಸಿ ಪ್ರತಿಭಟನೆ ನಡೆಯಿತ್ತು.
ವಿದ್ಯಾರ್ಥಿನ ಸಾವಿಗೆ ಕಾರಣರಾದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಪ್ರತಿಭಾಟನಾಕಾರರು ಆಗ್ರಹಿಸಿ, ಮಧು ಮತ್ತಾರ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕ್ಯಾಂಡಲ್ ಮಾರ್ಚ ನಡೆಸುವ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಹೈದರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷರಾದ ವಸಂತ್ ಕುಮಾರ್ ನಂದಿಹಾಳ ತಾಲೂಕು ಅಧ್ಯಕ್ಷರಾದ ಎಂ ವಿಜಯ್ ಮಾಚನೂರ ತಾಲೂಕು ಕಾರ್ಯದರ್ಶಿ ರಾಜಶೇಖರ ಗುಡದಿನ್ನಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.