ಮಲೇರಿಯಾ ರೋಗ ನಿರ್ಮೂಲನೆಗೆ ಡಾ.ಪಿ. ರಾಜಾ ಕರೆ

2
119

ಕಲಬುರಗಿ: ಮಲೇರಿಯಾ ರೋಗವನ್ನು ನಿರ್ಮೂಲನೆ ಮಾಡುವಲ್ಲಿ ನಾಗರಿಕ ಸಮಾಜದ ಗುರುತರ ಜವಾಬ್ದಾರಿಯಾಗಿದ್ದು, ಮಲೇರಿಯಾ ಪ್ರಕರಣಗಳನ್ನು ಸೊನ್ನೆಗೆ ತರುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ. ರಾಜಾ ಹೇಳಿದರು.

ಗುರುವಾರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ  ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಸಕ್ತ  ವಿಶ್ವ ಮಲೇರಿಯಾ ದಿನ ಘೋಷವಾಕ್ಯ ಸೊನ್ನೆ ಮಲೇರಿಯಾ ನನ್ನಿಂದ ಪ್ರಾರಂಭ ಎಂದಾಗಿದೆ ಎಂದು ಹೇಳಿದರು.

Contact Your\'s Advertisement; 9902492681

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಕೆ.ಪಾಟೀಲ್ ಮಾತನಾಡಿ ಮಲೇರಿಯಾ ರೋಗವು ಅನಾಫಿಲೀಸ್ ಎಂಬ ಹೆಣ್ಣು ಸೋಂಕಿತ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ರೋಗವು ವಾರ್ಷಿಕ ಅಂದಾಜು 500 ಮಿಲಿಯನ್ ಜನರನ್ನು ಬಲಿ ತೆಗೆದುಕೊಳ್ಳುತ್ತಿದ್ದು, ಭಾರತದಲ್ಲಿಯೂ ಕೂಡಾ ಮಲೇರಿಯಾದಿಂದ ಸಾಯುವವರ ಸಂಖ್ಯೆ ವಾರ್ಷಿಕ ಕನಿಷ್ಟ 19500 ದಿಂದ 20000 ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ ಎಂದರು.

2013 ರಿಂದ ಕಲಬುರಗಿ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, 2025 ರೊಳಗಾಗಿ ಮಲೇರಿಯಾ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ ಎಂದರು.

ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ.ಬಿ.ಎಸ್.ಗುಳಗಿ ಮಾತನಾಡಿ ಇಲಾಖೆಯಿಂದ ಕ್ಷೇತ್ರ ಮಟ್ಟದಲ್ಲಿ ಸಕ್ರೀಯ ಹಾಗೂ ಸ್ಥಿರ ಜ್ವರ ಸಮೀಕ್ಷೆ, ಸೊಳ್ಳೆಗಳ ಉತ್ಪತ್ತಿ ತಾಣಗಳ ಸಮೀಕ್ಷೆ ಹಾಗೂ ಅವುಗಳ ನಿರ್ಮೂಲನೆ, ದೊಡ್ಡ ನೀರಿನ ಆಗರಗಳನ್ನು ಗುರುತಿಸುವಿಕೆ ಹಾಗೂ ಅವುಗಳಲ್ಲಿ ಲಾರ್ವಾಹಾರೊ ಮೀನುಗಳನ್ನು ಬಿಟ್ಟು ಜೈವಿಕ ನಿಯಂತ್ರಣ ಚಟುವಟಿಕೆಗಳನ್ನು ಕೈಗೊಳ್ಳುವುದು, ಮಲೇರಿಯಾ ಸಮಸ್ಯಾತ್ಮಕ ಪ್ರದೇಶಗಳಲ್ಲಿ ಒಳಾಂಗಣ ಕೀಟನಾಶಕ ಸಿಂಪರಣೆಯನ್ನು ಮಾಡುವುದು, ಕೀಟನಾಶಕ ಲೇಪಿತ ಸೊಳ್ಳೆ ಪರದೆಗಳನ್ನು ಮಲೇರಿಯಾ ಪೀಡಿತ ಪ್ರದೇಶಗಳಿಗೆ ನೀಡುವುದು, ಸಮುದಾಯದಲ್ಲಿ ಮಲೇರಿಯಾ ರೋಗದ ಹರಡುವಿಕೆಯ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಾ.ಶಿವಶರಣಪ್ಪ ಭೂಸನೂರ, ಡಿಎಸ್‌ಓ ಡಾ.ರಾಜೇಂದ್ರ ಬಾಲ್ಕಿ, ಡಾ.ಶರಣಬಪ್ಪ ಕ್ಯಾತನಾಳ, ಹಾಗೂ ಇನ್ನಿತರ ಕಾರ್ಯಕ್ರಮ ಅಧಿಕಾರಿಗಳು, ಜಿಲ್ಲಾ ಮಟ್ಟದ ಮೇಲ್ವಿಚಾರಕರು ಉಪಸ್ಥಿತರಿದ್ದರು. ಜಿಲ್ಲಾ ಕೀಟಶಾಸ್ತ್ರಜ್ಞ ಚಾಮರಾಜ ದೊಡ್ಡಮನಿ ನಿರೂಪಿಸಿದರೆ ಸಮಾಲೋಚಕ ಕಾರ್ಣಿಕ ಕೊರೆ ವಂದಿಸಿದರು.

2 ಕಾಮೆಂಟ್ಗಳನ್ನು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here