14 ರಂದು ಒಂದು ದಿನದ ರಾಷ್ಟ್ರೀಯ ಸಮ್ಮೇಳನ

0
71

ಕಲಬುರಗಿ : ಪರಮಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜೀಯವರ 85ನೇ ಜನ್ಮ ದಿನದ ಪ್ರಯುಕ್ತ ಶರಣಬಸವ ವಿಶ್ವವಿದ್ಯಾಲಯ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಪದವಿ ಮಹಾವಿದ್ಯಾಲಯಗಳು ಮತ್ತು ಬಿ.ಎಡ್ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಇದೇ ನವೆಂಬರ್ 14 ರಂದು ಬೆಳಗ್ಗೆ 9 ಗಂಟೆಗೆ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾವರು ರಚಿಸಿರುವ ಮಹಾದಾಸೋಹ ಸೂತ್ರಗಳ ಮೇಲೆ ಒಂದು ದಿನದ ರಾಷ್ಟ್ರ ಮಟ್ಟದ ಸಮ್ಮೇಳನ ಆಯೋಜಿಸಲಾಗಿದೆ.

ಸಮ್ಮೇಳನವನ್ನು ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಅಧ್ಯಕ್ಷರು, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪರಮಪೂಜ್ಯ ಡಾ.ಶರಣಬಸವಪ್ಪ ಅಪ್ಪಾ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಹೆಚ್.ಎಮ್.ಮಹೇಶ್ವರಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

Contact Your\'s Advertisement; 9902492681

ಲಕ್ನೋ ಕೇಂದ್ರೀಯ ವಿಶ್ವವಿದ್ಯಾಲಯದ ಆಂಗ್ಲ ವಿಭಾಗ ಮತ್ತು ವಿದೇಶಿ ಭಾಷೆಯ ಮುಖ್ಯಸ್ಥ ಡಾ.ಮನೀಷ್‍ಕುಮಾರ ಗೌರವ, ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ ಗೌರವ ಅತಿಥಿಗಳಾಗಿ ಮತ್ತು ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ್ ನಿಷ್ಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಮ್ಮೇಳನದಲ್ಲಿ ಹೈದ್ರಾಬಾದಿನ ಡಾ.ಬಿ.ಆರ್.ಅಂಬೇಡ್ಕರ ಮುಕ್ತ ವಿಶ್ವವಿದ್ಯಾಲಯದ ಆಂಗ್ಲ ವಿಭಾಗ ಮತ್ತು ವಿದೇಶಿ ಭಾಷೆಯ ಮುಖ್ಯಸ್ಥ ಡಾ.ಕಿಶೋರಕುಮಾರ ರೆಡ್ಡಿ, ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರೊ. ವಿಜಯಾದೇವಿ ಮತ್ತು ಚೆನೈನ ಮದ್ರಾಸ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ತಮಿಳ್ ಸೆಲ್ವಿಯವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ 3 ಗಂಟೆಗೆ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪರಮಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜೀಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶರಣಬಸವ ವಿಶ್ವವಿದ್ಯಾಲಯದ ಸಮ ಕುಲಪತಿಗಳಾದ ಡಾ.ವಿ.ಡಿ.ಮೈತ್ರಿ ಮುಖ್ಯ ಅತಿಥಿಗಳಾಗಿ, ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನೀಲಕುಮಾರ ಬಿಡವೆ ಮತ್ತು ಕುಲಸಚಿವ ಮೌಲ್ಯಮಾಪನ ಡಾ.ಲಿಂಗರಾಜ ಶಾಸ್ತ್ರೀ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here