ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ‘ಎಸ್‌ಎ ಬೊಬ್ಡೆ’ ಪ್ರಮಾಣ ವಚನ ಸ್ವೀಕಾರ

0
44

ನವದೆಹಲಿ: ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರು ಸೋಮವಾರ ಭಾರತದ 47 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ ಅವರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 9: 30 ಕ್ಕೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು.

ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಅಕ್ಟೋಬರ್ 18 ರಂದು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ-ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಅವರನ್ನು ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದರು. ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಸುಮಾರು 18 ತಿಂಗಳು ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದು, ಏಪ್ರಿಲ್ 23, 2021 ರಂದು ನಿವೃತ್ತರಾಗಲಿದ್ದಾರೆ.

Contact Your\'s Advertisement; 9902492681

ಏಪ್ರಿಲ್ 24, 1956 ರಂದು ನಾಗ್ಪುರದಲ್ಲಿ ಜನಿಸಿದ ನ್ಯಾಯಮೂರ್ತಿ ಬೊಬ್ಡೆ ಪದವಿ ಮುಗಿಸಿ ನಾಗ್ಪುರ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದುಕೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here