ದೊಡ್ಡಪ್ಪ ಅಪ್ಪ ಕಾಲೇಜಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನೆ

0
93

ಕಲಬುರಗಿ: ನಗರದ ದೊಡ್ಡಪ್ಪ ಅಪ್ಪ ವಿಜ್ಞಾನ ವಸತಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನವನ್ನು ಶರಣ ಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಡಾ|| ಶರಣಬಸವಪ್ಪ ಅಪ್ಪ ಅವರು ಉದ್ಘಾಟಿಸಿದರು.

ವಿಜ್ಞಾನ ವಸ್ತುಪ್ರದರ್ಶನ ಮಕ್ಕಳಲ್ಲಿನ ಸ್ಪರ್ಧಾಮನೋಭಾವನೆಗೆ ವೇದಿಕೆಯನ್ನೋದಗಿಸಿ ಕೊಡುತ್ತದೆ.ಇದರಿಂದ ಮಕ್ಕಳಲ್ಲಿ ಸೃಜನಾತ್ಮಕ ಶಕ್ತಿ ಹೆಚ್ಚುತ್ತದೆ. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಆಲೋಚನೆಗಳನ್ನು ಪ್ರಾಯೋಗಿಕ ರೂಪದಲ್ಲಿ ಕಾರ್ಯನಿರತ ಮಾದರಿಗಳ ಮೂಲಕ ತೋರಿಸಲು ಅವಕಾಶವಿರುತ್ತದೆ, ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗಳ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸುತಿದ್ದರೆ ಮಕ್ಕಳಲ್ಲಿ ಪ್ರಾಯೋಗಿಕ ಶಕ್ತಿ ಹೆಚ್ಚಿಸಲು ಸಾಧ್ಯವಿದೆ, ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯವಿದೆ ಸೋಲು,ಗೆಲುವು ಮುಖ್ಯವಲ್ಲ ಎಂದು ನುಡಿದರು.

Contact Your\'s Advertisement; 9902492681

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶರಣಬವ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ನಿರಂಜನ ನಿಷ್ಠಿಯವರು ಮಾತನಾಡಿ ವಿಜ್ಞಾನ ವಸ್ತು ಪ್ರದರ್ಶನ ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಗುಣವನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸಂತೋಷದಾಯಕವಾದ ಕಲಿಕೆ ಏರ್ಪಡುತ್ತದೆ.ಅದ್ದರಿಂದ ವಿಜ್ಞಾನ ವಸ್ತು ಪ್ರದರ್ಶನಗಳ ಕಲಿಕೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.

ಶರಣಬಸವೇಶ್ವರ ವಿಜ್ಞಾನ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ||ರಾಮಕೃಷ್ಣರೆಡ್ಡಿಯವರು ಮಾತನಾಡಿ ಮಕ್ಕಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಶಿಕ್ಷಕರು ಪಾಲಕರು ಪ್ರೇರೇಪಿಸಬೇಕು, ವೇದಿಕೆ ಕಲ್ಪಿಸಿಕೊಡಬೇಕೆಂದು ಆಶಯ ವ್ಯಕ್ತಪಡಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here