ಕಲಬುರಗಿ: ಹಾಸ್ಟಲ್ ಶುಲ್ಕವೂ ಸೇರಿದಂತೆ ವಿದ್ಯಾರ್ಥಿಗಳ ಮೇಲೆ ಶುಲ್ಕದ ಹೊರೆಯನ್ನು ಹೇರುವ ಮೂಲಕ ಬಹುಸಂಖ್ಯಾತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ಹೊರಗಿಡುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ವಿರೋಧಿಸಿ, ಶುಲ್ಕ ಹೆಚ್ಚಳದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ಕ್ರೂರ ದಾಳಿಯನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ರಾಜೇಂದ್ರ ರಾಜವಾಳ ತೀವ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಿ ಪಡಿಸಿದ್ದಾರೆ.
ಅವರು ಸಂಘಟನೆಯಿಂದ ಪತ್ರಿಕಾ ನೀಡಿ ಕಳೆದ ಕೆಲವು ದಿನಗಳ ಹಿಂದೆ ಪೊಲೀಸರ ಮೇಲೆ ವಕೀಲರು ನಡೆಸಿದ್ದ ದಾಳಿಯನ್ನು ವಿರೋಧಿಸಿ ‘ವಕೀಲರ ಕ್ರೌರ್ಯ’ವೆಂದು ಇದೇ ಪೊಲೀಸರು ಪ್ರತಿಭಟನೆ ನಡೆಸಿದ್ದರು. ಆದರೆ ಇಂದು ಶಾಂತಿಯುವ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅದೇ ಪೊಲೀಸರು ಕ್ರೌರ್ಯವೆಸಗಿದ್ದಾರೆ. ಸರ್ಕಾರಗಳ ಅಡಿಯಾಳುಗಳಾಗಿರುವ ಪೊಲೀಸ್ ವ್ಯವಸ್ಥೆ ಸರ್ಕಾರಿ ಗೂಂಡಾಗಳಂತೆ ವರ್ತಿಸುತ್ತಿದ್ದಾರೆ. ಬಲಪ್ರಯೋಗ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಹತ್ತಿಕ್ಕಲು ಯತ್ನಿಸುತ್ತಿರುವ ಸರ್ಕಾರದ ಧೋರಣಿಯಾವಿದ್ದು ಕೆವಿಎಸ್ ವಿರೋಧಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಶಿಕ್ಷಣವನ್ನು ಖಾಸಗೀಕರಣ ಮತ್ತು ವ್ಯಾಪಾರೀಕರಣಗೊಳಿಸುತ್ತಿರುವ ಸರ್ಕಾರ ವ್ಯಾಪಾರ ನೀತಿಯ ವಿರುದ್ಧ ಮತ್ತು “ಗುಣಮಟ್ಟದ ಉನ್ನತ ಶಿಕ್ಷಣ ಉಚಿತವಾಗಿ ಸಿಗಬೇಕೆಂದು” ಹೋರಾಟ ನಡೆಸುತ್ತಿರುತ್ತಿವ ಜೆಎನ್‌ಯು ವಿದ್ಯಾರ್ಥಿಗಳ ಜೊತೆ ಕೆವಿಎಸ್ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ.