ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಕಲಬುರಗಿ ವಿನಾನ ನಿಲ್ದಾಣ ಹೊಸ ಅಯಾಮ ನೀಡಲಿದೆ. ರಾಜ್ಯದ ಈಶಾನ್ಯ ಭಾಗಕ್ಕೆ ವಿಮಾನಯಾನ ಸಂಪರ್ಕ ಹೊಂದಿರುವುದರಿಂದ, ದೇಶ ವಿದೇಶದಿಂದ ಉದ್ಯಮಿಗಳು ಇಲ್ಲಿ ಹಣ ಹೂಡಿಕೆ ಮಾಡಲಿದ್ದಾರೆ ಎಂದು ತಿಳಿಸಿದರು.
2008 ರಲ್ಲಿ ನನ್ನಿಂದಲೆ ಅಡಿಗಲ್ಲು ಹಾಕಿದ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆ ಮಾಡುತ್ತಿದ್ದು, ಯಾವುದೋ ಜನ್ಮದ ಪುಣ್ಯದ ಫಲ ಎಂದು ಭಾವಿಸುತ್ತೇನೆ ಎಂದು ಹರ್ಷವ್ಯಕ್ತಪಡಿಸಿದರು.
ಕಲ್ಯಾಣ ಕರ್ನಾಟಕದ ಘೋಷಣೆ ನಂತರ ಇಂದು ಸಿಮೆಂಟ್ ನಗರಿಯಲ್ಲಿ ವಿಮಾನ ನಿಲ್ದಾಣ ಸೇವೆ ಲಭ್ಯವಾಗುತ್ತಿದ್ದು, ಇಲ್ಲಿನ ಜನರ ಹರ್ಷಕ್ಕೆ ಪಾರವೆ ಇಲ್ಲದಂತಾಗಿದೆ. ಈ ಭಾಗಕ್ಕೆ ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಿ ಕಲ್ಬುರ್ಗಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಸಮಗ್ರ ಅಭಿವೃದ್ದಿಗೊಳಿಸಿ ಕಲ್ಯಾಣ ಪದದ ನಿಜ ಅರ್ಥದಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂಬ ಭರವಸೆಯನ್ನು ನೀಡಿದರು.
3.175 ಕಿ.ಮಿ. ಉದ್ದದ ರನ್ವೆ ಹೊಂದಿರುವ ಕಲಬುರಗಿ ವಿಮಾನ ನಿಲ್ದಾಣ ರಾಜ್ಯದ 2ನೇ ಹಾಗೂ ದೇಶದ 10ನೇ ಅತಿ ಉದ್ದದ ರನ್ವೆ ಇದಾಗಿದೆ. ದೇಶಕ್ಕೆ ಶೇ.30 ರಷ್ಟು ತೊಗರಿ ಉತ್ಪಾದಿಸುವ ಮತ್ತು ಸಿಮೆಂಟ್ ರಫ್ತಿನಿಂದ ಕಲಬುರ್ಗಿ ಜಿಲ್ಲೆ ವಿಶ್ವದಾದ್ಯಂತ ಗಮನ ಸೆಳೆದಿದೆ. ಹೀಗಾಗಿ ಇಲ್ಲಿನ ವಿಮಾನ ನಿಲ್ದಾಣವನ್ನು ಭವಿಷ್ಯದಲ್ಲಿ ಸರಕು ಸಾಗಣೆಗೂ ಬಳಸಿಕೊಳ್ಳುವಂತೆ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.
ಕಲಬುರಗಿ ಜನರ ಪ್ರೀತಿ ನನ್ನ ಮೇಲೆ ತುಸು ಹೆಚ್ಚಿದೆ. ನಿಮ್ಮ ಪ್ರೀತಿಗೆ ಚಿರರುಣಿಯಾಗಿದ್ದು, ನೀವಿಟ್ಟ ಭರವಸೆಗೆ ಯಾವುದೇ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುವೆ ಎಂದು ತಿಳಿಸಿದರು.